ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018
ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು ಮಾಡಿಸುತ್ತೇವೆ. ಇದರ ಬಗ್ಗೆ ಅನುಮಾನ ಬೇಡ ಎಂದರು.
ಸರ್ಕಾರ ಆಗ ಬೀಳುತ್ತದೆ, ಈಗ ಬೀಳುತ್ತದೆ ಎಂದು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡುತ್ತಿದ್ದಾರೆ. ಆದನ್ನು ಬಿಟ್ಟು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ ಮಧು ಬಂಗಾರಪ್ಪ, ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ರಾಮನನ್ನು ಎಳೆದು ತರುತ್ತಾರೆ. ಯಾಕೆಂದರೆ ಅವರ ಬಳಿ ಕಾಮ್ ಕೀ ಬಾತ್ ಇಲ್ಲ. ರಾಮ್ ಕೀ ಬಾತ್ ಅಷ್ಟೇ ಇದೆ ಅಂತಾ ವ್ಯಂಗ್ಯವಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494