ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಆಗಸ್ಟ್ 22 ಮತ್ತು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Minister-Madhu-Bangarappa-in-shimoga-press-trust

ಆಗಸ್ಟ್ 22 ರಂದು ಬೆಳಿಗ್ಗೆ 10:30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬಿ.ಹೆಚ್.ರಸ್ತೆಯ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸೊರಬಕ್ಕೆ ತೆರಳಲಿದ್ದು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಆಗಸ್ಟ್ 23 ರಂದು ಬೆಳಿಗ್ಗೆ 8:15ಕ್ಕೆ ಆನವಟ್ಟಿ ಮತ್ತು ನೇರಲಿಗೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಬೆಳಿಗ್ಗೆ 8:30ಕ್ಕೆ ಆನವಟ್ಟಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಆನವಟ್ಟಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಂ.ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.