ಶಿವಮೊಗ್ಗ, ತೀರ್ಥಹಳ್ಳಿಗೆ ಇವತ್ತು ಮಿನಿಸ್ಟರ್‌ ಭೇಟಿ, ಸಭೆಗಳಲ್ಲಿ ಭಾಗಿ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.

ಸಚಿವರು ಮೇ 27ರ ಬೆಳಗ್ಗೆ 9:30ಕ್ಕೆ ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಬೆಳಗ್ಗೆ 11ಕ್ಕೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Madhu-Bangarappa-meeting-at-Shimoga-DC-office.

ಸಂಜೆ 5 ಗಂಟೆಗೆ ತೀರ್ಥಹಳ್ಳಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ರಾತ್ರಿ 10 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp