ಸಚಿವ ಮಧು ಬಂಗಾರಪ್ಪ ದಿಢೀರ್‌ ಬೆಂಗಳೂರಿಗೆ ವಾಪಸ್‌, ಶಿವಮೊಗ್ಗ, ತೀರ್ಥಹಳ್ಳಿ ಸಭೆಗಳು ರದ್ದು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ದಿಢೀರ್‌ ಬೆಂಗಳೂರಿಗೆ ತೆರಳಿದ್ದಾರೆ. ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗಬೇಕಿತ್ತು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಚಿವ ಮಧು ಬಂಗಾರಪ್ಪ ಇಂದು ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಶುಭಂ ಹೊಟೇಲ್‌ನಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿದರು. ಸಭೆಯ ನಂತರ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸಭೆ ನಿಗದಿಯಾಗಿತ್ತು. ತೀರ್ಥಹಳ್ಳಿಯಲ್ಲಿಯು ಕಾರ್ಯಕರ್ತರ ಸಭೆ ನಿಗದಿಯಾಗಿತ್ತು.

Minister-Madhu-Bangarappa-Meeting-at-Shubham-Hotel

ಇವೆರಡು ಸಭೆಗಳನ್ನು ರದ್ದುಗೊಳಿಸಿ ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆ ಬೆನ್ನಿಗೆ ಸಚಿವ ಮಧು ಬಂಗಾರಪ್ಪ ದಿಢೀರ್‌ ಬೆಂಗಳೂರಿಗೆ ಮರಳಿದ್ದಾರೆ. ನಾಳೆ ಬೆಳಗ್ಗೆ ಮುಖ್ಯಮಂತ್ರಿ ಅವರು ಕರೆದಿರುವ ಬ್ರೇಕ್ ಫಾಸ್ಟ್‌ ಮೀಟಿಂಗ್‌ನಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!