ಇಂದಿನಿಂದ ಎರಡು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಸೆಪ್ಟೆಂಬರ್ 7 ಮತ್ತು 8 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳು, ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಸೆ.7ರಂದು ಬೆಳಿಗ್ಗೆ 11 ಗಂಟೆಗೆ ತೀರ್ಥಹಳ್ಳಿಗೆ ತೆರಳಲಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಯಲಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

Minister-Madhu-Bangarappa-in-shimoga-press-trust

ಸೆ.8 ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಡೆಯಲಿರುವ ಜಿಲ್ಲಾಮಟ್ಟದ ಪ್ರಜಾಸೇವಾ ಇಲಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕುಬಟೂರು ದೊಡ್ಡಕೆರೆಗೆ ಬಾಗೀನ ಸಮರ್ಪಣೆ ಮಾಡಲಿದ್ದಾರೆ. ಗ್ರಾಮದೇವತೆ ಶ್ರೀ ದ್ಯಾಮವ್ವ ದೇವಿಯ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.