ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 19 DECEMBER 2024
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ (Tour) ಮಾಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
ಸಚಿವ ಮಧು ಬಂಗಾರಪ್ಪ ಡಿಸೆಂಬರ್ 20 ರಂದು ಬೆಳಗ್ಗೆ 9.30ಕ್ಕೆ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಶಿಕಾರಿಪುರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸೊರಬ ಬ್ಲಾಕ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಸೊರಬ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಹೊಸ ಕಟ್ಟಡ ಮತ್ತು ಗ್ರಂಥಾಲಯ ಹಾಗೂ ಇತರೆ ಕಾಮಗಾರಿಗಳ ಉದ್ಘಾಟನೆ, ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೊರಬದ ಸಚಿವರ ಕಾರ್ಯಾಲಯದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಮತ್ತು ತಾಲೂಕು ಬಗರ್ ಹುಕುಂ ಸಮಿತಿ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಸೊರಬದ ರಂಗಮಂದಿರದಲ್ಲಿ 2023-24ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರಚಾಲಿತ ಬೈಕ್ ವಿತರಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ನಿಗಮಗಳ ಫಲಾನುಭವಿಗಳಿಗೆ ಬೋರ್‌ವೆಲ್ ಪಂಪ್‌ಸೆಟ್ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಯಾವ್ಯಾವ ದಿನ ಎಲ್ಲೆಲ್ಲಿಗೆ ಪ್ರವಾಸ?
ಡಿಸೆಂಬರ್ 21ರಂದು ಆನವಟ್ಟಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಆನವಟ್ಟಿ ಬ್ಲಾಕ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಆನವಟ್ಟಿ ಬಿ.ಸಿ.ಎಂ. ಹಾಸ್ಟೇಲ್ ಕಟ್ಟಡ ಮತ್ತು ಇತರೆ ಕಾಮಗಾರಿಗಳ ಉದ್ಘಾಟನೆ ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಆನವಟ್ಟಿಯಿಂದ ರಸ್ತೆ ಮೂಲಕ ಬೆಂಗಳೂರು ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422