ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಮಾರ್ಚ್ 22 ಹಾಗೂ 23ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ.22ರಂದು ಬೆಳಿಗ್ಗೆ 10.30ಕ್ಕೆ ಹೊಳೆಹೊನ್ನೂರಿನ ಭಗೀರಥ ಸಮುದಾಯ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.

ಮಾ.23ರಂದು ಬೆಳಿಗ್ಗೆ 9.30ಕ್ಕೆ ತಾಲ್ಲೂಕಿನ ಪುರದಾಳು ಗ್ರಾಮದ ಬಾರೆಹಳ್ಳ ಚೆಕ್ಡ್ಯಾಂಗೆ ಸ್ಲುಯಿಸ್ ಗೇಟ್ ಅಳವಡಿಕೆ ಮತ್ತು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಬೆಳಿಗ್ಗೆ 11ಕ್ಕೆ ಭದ್ರಾವತಿಯ ದೈವಜ್ಞ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವರು. ಮಧ್ಯಾಹ್ನ 3.30ಕ್ಕೆ ತೀರ್ಥಹಳ್ಳಿಯ ಕೆಟಿಕೆ ಸಭಾಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಗಾಜನೂರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್ ದಾಖಲಿಸಿದ ಮೆಸ್ಕಾಂ







