ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರು ಅಕ್ಟೋಬರ್ 11 ಮತ್ತು 12 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಅಕ್ಟೋಬರ್ 11 ರಂದು ಬೆಂಗಳೂರಿನಿಂದ ಹೊರುಟು ಸಂಜೆ 6:30ಕ್ಕೆ ಸೊರಬಕ್ಕೆ ಆಗಮಿಸಲಿದ್ದಾರೆ. ತಾಲ್ಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ಸುರಭಿ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿರುವ ಸಾರ್ವಜನಿಕ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ನಂತರ ರಾತ್ರಿ 7:30 ಕ್ಕೆ ಚಂದ್ರಗುತ್ತಿಯಲ್ಲಿ ನಡೆಯಲಿರುವ ಶ್ರೀ ರೇಣುಕಾಂಬ ದೇವಿಯ ದಸರಾ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ, ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 12 ರಂದು ಬೆಳಿಗ್ಗೆ 9:30 ಕ್ಕೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಬಿ.ಹೆಚ್. ರಸ್ತೆಯಲ್ಲಿ ಬಿ.ಎಸ್.ಸಿ ಟೆಕ್ಸ್ಟೈಲ್ಸ್ ನೂತನ ಶೋರೂಂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನವುಲೆಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.