ಶಿವಮೊಗ್ಗ: ಸ್ವಾತಂತ್ರ್ಯಕ್ಕು ಮೊದಲು ಧರ್ಮದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡಿದರು. ಇಷ್ಟಾದರು ಕಾಂಗ್ರೆಸ್ ಪಕ್ಷ ಮುಸ್ಲಿಮರ ತುಷ್ಠೀಕರಣ ನೀತಿ ಬಿಟ್ಟಿಲ್ಲ. ಬಡವರಿಗೆ ಹಂಚುವ ಮನೆಗಳಲ್ಲಿಯು ಶೇ.15ರಷ್ಟು ಮೀಸಲಾತಿ (Reservation) ನೀಡಲಾಗಿದೆ. ಇದು ಅತ್ಯಂತ ಘೋರ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ಮುಸ್ಲಿಮರಿಗೆ ವಸತಿ ನೀಡಬಾರದು ಎಂದು ನಾವು ಹೇಳುತ್ತಿಲ್ಲ. ಎಲ್ಲಾ ಬಡವರಿಗೆ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ವಸತಿ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಇದರಲ್ಲಿಯು ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ (Reservation) ನಿಗದಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಟೀಕಿಸಿದ್ದಾರೆ. ಯಡಿಯೂರಪ್ಪ ಅವರು ಕೂಲಿ ಕಾರ್ಮಿಕರು, ಶ್ರಮಿಕರು, ರೈತ ಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು. ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ನಾಯಕರು ಮತ್ತು ಯಡಿಯೂರಪ್ಪ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು. ಇದರಿಂದಾಗಿಯೇ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿದೆ. ಅದೇ ಕಾರಣಕ್ಕೆ ಮಧು ಬಂಗಾರಪ್ಪ ಇವತ್ತು ಸಚಿವರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ ಎಂಬುದನ್ನು ಅವರ ಶಾಸಕರೆ ಬಹಿರಂಗಪಡಿಸುತ್ತಿದ್ದಾರೆ. ಬಡವರಿಗೆ ಸೂರು ನೀಡುವ ವಸತಿ ನಿಗಮಗಳು ಮತ್ತು ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರ ಕುರಿತು ಶಾಸಕ ಬಿ.ಆರ್.ಪಾಟೀಲ್ ನೋವು ಹಂಚಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತನಿಖೆಯ ಯೋಚನೆ ಮಾಡದಿರುವುದು ದುರದೃಷ್ಟ ಎಂದು ಬೇಸರ ವ್ಯಕ್ತಪಡಿಸಿದರು. ಅನೇಕ ಇಲಾಖೆಯಲ್ಲಿ ಇದೇ ಮಾದರಿ ಭ್ರಷ್ಟಾಚಾರ ನಡೆಯುತ್ತಿದೆ. ಗುತ್ತಿಗೆದಾರರು ಹೋದರೆ ಯೋಜನೆಗೆ ಅನುಮತಿ ನೀಡಲಾಗುತ್ತದೆ. ಶಾಸಕರು ಹೋದರೆ ಅನುಮತಿ ನಿರಾಕರಿಸಲಾಗುತ್ತಿದೆ. ಇದರ ಬಗ್ಗೆ ಅನೇಕರು ಆರೋಪಿಸಿದ್ದಾರೆ. ಈ ಕುರಿತು ತನಿಖೆಯಾಗಬೇಕು. ಮುಸ್ಲಿಂ ತುಷ್ಠೀಕರಣದ ವಿರುದ್ಧ, ಹಿಂದೂಗಳ ಮೇಲಿನ ದಬ್ಬಾಳಿಕೆ ನಿಲ್ಲಿಸುವಂತೆ ವಿಧಾನಸಭೆ ಅಧಿವೇಶನದ ಒಳಗೆ, ಹೊರಗೆ ಬೃಹತ್ ಹೋರಾಟವನ್ನು ಮಾಡಲಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರ ಅಧ್ಯಕ್ಷ ಮೋಹನ್ ರೆಡ್ಡಿ ಸೇರಿ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು. ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ, ಹೊರ ಇರುವು ಇಳಿಕೆ, ಇವತ್ತು ಎಷ್ಟಿದೆ? ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. » ಶಿವಮೊಗ್ಗ ಲೈವ್ gmail » Whatsapp Number 7411700200ಸರ್ಕಾರ ಭ್ರಷ್ಟಾಚಾರದ ಕೂಪ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು