ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆ ಮತದಾರರ ಪೈಕಿ ಗ್ರಾಪಂ ಸದಸ್ಯರೇ ಹೆಚ್ಚಿನವರು. ಅವರಲ್ಲಿ ಬಿಜೆಪಿ ಬೆಂಬಲಿತರ ಸಂಖ್ಯೆಯೂ ಜಾಸ್ತಿಯಿತ್ತು. ಪ್ರಚಾರ ಸಂದರ್ಭದಲ್ಲಿ ಮೂರು ಬಾರಿ ಮತದಾರರನ್ನು ಭೇಟಿಯಾಗಿದ್ದು ಒಟ್ಟು 102 ಪ್ರಚಾರ ಸಭೆಗಳನ್ನು ನಡೆಸಿದ್ದು ಗೆಲುವಿಗೆ ಸಹಕಾರಿಯಾಯಿತು ಎಂದು ಪರಿಷತ್ ಚುನಾವಣೆ ವಿಜೇತ ಡಿ.ಎಸ್.ಅರುಣ್ ಹೇಳಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿ ಚುನಾವಣೆಯನ್ನೂ ಪ್ರತಿಷ್ಠೆಯಾಗಿಯೇ ಪರಿಗಣಿಸುತ್ತಾರೆ. ಪರಿಷತ್ ಚುನಾವಣೆಯನ್ನೂ ಗಂಭೀರವಾಗಿ ಸ್ವೀಕರಿಸಿ ನನ್ನ ಪರ ಪ್ರಚಾರ ಮಾಡಿದರು. ಗ್ರಾಮೀಣಾ ಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿದ ಕೆಲಸಗಳೂ ಗೆಲುವಿಗೆ ಪೂರಕವಾಯಿತು ಎಂದು ತಿಳಿಸಿದರು.
ಕ್ಷೇತ್ರದ ಪ್ರತಿ ಶಾಸಕರು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಇದು ತಮ್ಮದೇ ಚುನಾವಣೆ ಎನ್ನುವಂತೆ ನನ್ನ ಬೆನ್ನಿಗೆ ನಿಂತರು. ಪಕ್ಷದ ಮುಖಂಡರು, ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂಬಂತೆ ಕೆಲಸ ಮಾಡಿ ದರು. ಜನಸ್ವರಾಜ್ ಸಮಾವೇಶದಲ್ಲಿ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿರಲಿಲ್ಲ. ಆದರೂ ಪಕ್ಷದ ಕಾರ್ಯಕರ್ತರು ಆಗಲೇ ಪಕ್ಷದ ಗೆಲುವಿಗೆ ಪಣ ತೊಟ್ಟಿದ್ದರು ಎಂದರು.
ಮುಂದಿನ ದಿನಗಳಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಶ್ರಮಿಸುತ್ತೇನೆ. ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವುಗಳ ಪರಿಹಾರದ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಶ್ರೀನಾಥ್, ಎಸ್.ಎನ್.ಚನ್ನಬಸಪ್ಪ, ಶಿವರಾಜ್, ಕಾರ್ಯದರ್ಶಿ ಜ್ಞಾನೇಶ್ವರ್,.ಖಜಾಂಚಿ ಎಸ್.ರಮೇಶ್, ಮೇಯರ್ ಸುನೀತಾ ಅಣ್ಣಪ್ಪ, ಪ್ರಮುಖರಾದ ಹೃಷಿಕೇಶ್ ಪೈ, ಎನ್.ಡಿ.ಸತೀಶ್, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200