SHIVAMOGGA LIVE | 19 JUNE 2023
SHIMOGA : ಗ್ಯಾರಂಟಿ ಭರವಸೆಗಳನ್ನು (Guarantee Schemes) ಈಡೇರಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ಧ ಸಹೋದರರು ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವ್ಯಕ್ತಿಗೆ 15 ಕೆ.ಜಿ. ಅಕ್ಕಿ ಕೊಡಬೇಕು
ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಗ್ಯಾರಂಟಿ (Guarantee Schemes) ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಷರತ್ತು ವಿಧಿಸುತ್ತಿದೆ. ರಾಜ್ಯಕ್ಕೆ ಎದುರಾಗಿರುವ ಸಂಕಷ್ಟದ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. 200 ಯುನಿಟ್ ಉಚಿತ ವಿದ್ಯುತ್, 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಉಚಿತ ಪ್ರಯಾಣ, ಗೃಹ ಲಕ್ಷ್ಮಿ ಯೋಜನೆಗಳಿಗೆ ಷರತ್ತು ವಿಧಿಸಿ ಗೊಂದಲ ಮೂಡಿಸಲಾಗಿದೆ ಎಂದು ಆರೋಪಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್ ವರದಿ ಇಂಪ್ಯಾಕ್ಟ್, ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತಪ್ಪಿತು ಮತ್ತಷ್ಟು ಅಪಘಾತ
ಕೇಂದ್ರ ಸರ್ಕಾರ ಈಗಾಗಲೆ 5 ಕೆ.ಜಿ. ಅಕ್ಕಿ ಪೂರೈಸುತ್ತಿದೆ. ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಇದಕ್ಕೆ 10 ಕೆ.ಜಿ. ಅಕ್ಕಿಯನ್ನು ಸೇರಿ ಪ್ರತಿ ವ್ಯಕ್ತಿಗೆ ಒಟ್ಟು 15 ಕೆ.ಜಿ. ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿದರು.
ಮೋದಿ ಸರ್ಕಾರ ಕಾಂಗ್ರೆಸ್ ಭರವಸೆ ಈಡೇರಿಸಬೇಕಾ?
ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಕೇಂದ್ರದಲ್ಲಿರುವ ಮೋದಿ ಸರ್ಕಾರ ಚುನಾವಣೆ ಸಂದರ್ಭ ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರಿಸಲು ಇರುವುದಲ್ಲ. ಚುನಾವಣೆ ಸಂದರ್ಭ ಕೊಟ್ಟ ಭರವಸೆಗಳನ್ನು ಈಡೇರಿಸುವುದು ತಮ್ಮ ಕರ್ತವ್ಯ. ಅದನ್ನು ಬಿಟ್ಟು ರಸ್ತೆಗಿಳಿದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಅನ್ನುವುದು ಅಪಹಾಸ್ಯ. ರಾಜ್ಯದ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯಲಾಗುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸಬೇಕು ಎಂದು ರಸ್ತೆಗಿಳಿದು ಹೋರಾಟ ನಡೆಸುತ್ತೇವೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಬಿಜೆಪಿ ಸಭೆಯಲ್ಲಿ ‘ಕಳ್ಳ, ಮಳ್ಳ’ ಹೇಳಿಕೆ, ಭಾಷಣದ ವೇಳೆ ಕರೆಂಟ್ ಕಟ್, ಏನೇನಾಯ್ತು? – ಇಲ್ಲಿದೆ 8 ಫಟಾಫಟ್ ಅಪ್ಡೇಟ್
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ