ಶಿವಮೊಗ್ಗದಲ್ಲಿ ರಾಜ್ಯಸಭೆ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ, ಏನಂದ್ರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ 88 ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಯುಪಿಎಸ್‌ಸಿಯ ಒಂದೇ ಒಂದು ಪತ್ರಿಕೆ ಸೋರಿಕೆಯಾಗುವುದಿಲ್ಲ ಯಾಕೆ ಎಂದು ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್ ಪ್ರಶ್ನಿಸಿದರು.

ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಆರ್‌.ಎಸ್‌.ಎಸ್. ಜೊತೆ ನಿಕಟ ಸಂಪರ್ಕವಿರುವ ಖಾಸಗಿ ಕಾಲೇಜುಗಳಲ್ಲಿಯೇ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತಿದೆ. ಇದರ ಹಿಂದೆ ಬಿಜೆಪಿ ಮತ್ತು ಆರ್.ಎಸ್.ಎಸ್ ನವರಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನೀಟ್ ಅಕ್ರಮದಿಂದಾಗಿ ದೇಶದಲ್ಲಿ 21 ಜನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ರಮದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ. ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಿ ಕ್ಷಮೆ ಕೇಳಬೇಕು. ಇನ್ನು, ದೇಶದಲ್ಲಿ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವ ಅವಶ್ಯಕತೆಯಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಹೊಸ ಕಾಯಿದೆ ತಂದಿದ್ದಾರೆ. ಅದರಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಗಟ್ಟುವ ಕುರಿತು ಯಾವುದೇ ಅಂಶಗಳಿಲ್ಲ ಎಂದು ಡಾ. ಸೈಯದ್ ನಾಸೀರ್ ಹುಸೇನ್ ಆರೋಪಿಸಿದರು.

Rajyasabha-MP-Dr-Syed-Nasir-Hussain-press-meet-in-Shimoga

ಅಯೋಧ್ಯೆ ರಾಮಮಂದಿರದ ಹುಂಡಿ ಹಣ ಕಳ್ಳತನ ನಡೆದಿದ್ದು, ಕೇಂದ್ರ ಸರ್ಕಾರವೇ ಮಾಡಿರುವ ಸಮಿತಿಯವರೆ ಕಳ್ಳತನ ಮಾಡಿದ್ದಾರೆ. ಸದನದಲ್ಲಿ ಯಾವುದೇ ಚರ್ಚೆ ನಡೆಸದೆ ಪೆಟ್ರೋಲ್ ಮತ್ತು ಡೀಸೆಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬಳಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್‌, ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.