ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 17 ಡಿಸೆಂಬರ್ 2019
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ, ನಳೀನ್ ಕುಮಾರ್ ಕಟೀಲ್ ಅವರು ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಸಂಘಟನೆ ದೃಷ್ಟಿಯಿಂದ ಹಲವು ಸಭೆಗಳನ್ನು ನಡೆಸಿದರು.
ಕೋರ್ ಕಮಿಟಿ ಮೀಟಿಂಗ್
ಜಿಲ್ಲೆಯಲ್ಲಿ ಪಕ್ಷದ ಸಂಘಟನೆ, ಕಾರ್ಯಚಟುವಟಿಕೆ ಕುರಿತು ಚರ್ಚಿಸಲು ಕೋರ್ ಕಮಿಟಿ ಸಭೆ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಉಪ ಮೇಯರ್ ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಸಂಪೂರ್ಣ ದಿವಾಳಿ
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷವು ಸಂಪೂರ್ಣ ದಿವಾಳಿಯಾಗಿದೆ. ಇದನ್ನು ಸರಿಪಡಿಸಿಕೊಳ್ಳಲು ಪೌರತ್ವ ಕಾಯ್ದೆಯನ್ನು ಮುಂದಿಟ್ಟುಕೊಂಡು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಈ ಕಾಯ್ದೆಯಿಂದ ದೇಶದಲ್ಲಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ಎಂದರು.

ಸೂಕ್ತ ಸಮಯದಲ್ಲಿ ಸಿಎಂ ನಿರ್ಧಾರ
ಸಚಿವ ಶ್ರೀರಾಮುಲು ಮತ್ತು ರಮೇಶ್ ಜಾರಕೀಹೊಳಿ ಅವರಿಗೆ ಡಿಸಿಎಂ ಹುದ್ದೆ ನೀಡುವ ಕುರಿತು ಕೇಳಿದ ಪ್ರಶ್ನೆಗೆ, ಸಂಪುಟ ವಿಸ್ತರಣೆ ಜವಾಬ್ದಾರಿ ಮುಖ್ಯಮಂತ್ರಿ ಅವರಿಗೆ ಸಂಬಂಧಿಸಿದ್ದು. ಸೂಕ್ತ ಸಂದರ್ಭದಲ್ಲಿ ಅವರು ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
BJP State President Nalin Kumar Katil Visits Shimoga BJP Office. Holds Core Committee meeting today regarding organization.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು





