ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಯ್ಕೆ ಚುನಾವಣೆಗೆ ಸಮಯ ನಿಗದಿಯಾಗಿದೆ. ಬುಧವಾರದಿಂದ ಪಾಲಿಕೆಯಲ್ಲಿ ನೂತನ ಮೇಯರ್ ಆಡಳಿತ ಶುರುವಾಗಲಿದೆ.
ಯಾರಾಗ್ತಾರೆ ಶಿವಮೊಗ್ಗದ ನೂತನ ಪ್ರಥಮ ಪ್ರಜೆ?
ಮಹಾನಗರ ಪಾಲಿಕೆಯ ಮೂರನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಬುಧವಾರ ಚುನಾವಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ನೂತನ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ಸುನೀತಾ ಅಣ್ಣಪ್ಪ, ಉಪಮೇಯರ್ ಸ್ಥಾನಕ್ಕೆ ಗನ್ನಿ ಶಂಕರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಬೆಳಗ್ಗೆ ನಡೆಯುತ್ತೆ ಮಹತ್ವದ ಮೀಟಿಂಗ್
ಮೇಯರ್, ಉಪ ಮೇಯರ್ ಆಯ್ಕೆ ಬಹುತೇಕ ಖಚಿತವಾಗಿದ್ದರೂ, ಬಿಜೆಪಿ ಕಾರ್ಯಾಲಯದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ. ಬುಧವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಪಕ್ಷದ ಹಿರಿಯ ಮುಖಂಡರು ಸಭೆ ನಡೆಸಲಿದ್ದಾರೆ. ಈ ಸಭೆಯ ಬಳಿಕ ಅಂತಿಮ ನಿರ್ಣಯ ಪ್ರಕಟವಾಗಲಿದೆ.
ಮೈಸೂರು ಟೂರ್‌ನಲ್ಲಿ ಕಮಲ ಕಾರ್ಪೊರೇಟರ್‌ಗಳು
ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆ ಬೆನ್ನಿಗೆ ಬಿಜೆಪಿಯ ಕಾರ್ಪೊರೇಟರ್‌ಗಳು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಎಲ್ಲರೂ ಒಟ್ಟಿಗೆ ಇರುವಂತೆ ನೋಡಿಕೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಹೊತ್ತಿಗೆ ಎಲ್ಲರೂ ಒಟ್ಟಿಗೆ ಪಾಲಿಕೆ ಆವರಣಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422