ಶಿವಮೊಗ್ಗಕ್ಕೆ ನಿಖಿಲ್‌ ಕುಮಾರಸ್ವಾಮಿ, ಮೂರು ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಕಡಿದಾಳು ಗೋಪಾಲ್‌, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂಟಪ, ಸಂಜೆ 5.30ಕ್ಕೆ ಭದ್ರಾವತಿ ಬಸ್‌ ನಿಲ್ದಾಣದ ಸಮೀಪ ಇರುವ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಖಿಲ್‌ ಕುಮಾರಸ್ವಾಮಿ ಕಾರ್ಯಕರ್ತರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

JDS-district-president-Kadidal-Gopal-Former-MLA-Prasanna-Kumar

ಪಕ್ಷ ಸಂಘಟನೆಗಾಗಿ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯು ಕಾರ್ಯಕರ್ತರ ಜೊತೆಗೆ ಚರ್ಚೆ, ಪಕ್ಷ ಸಂಘಟನೆ ಮತ್ತು ಮಿಸ್ಡ್‌ ಕಾಲ್‌ ಅಭಿಯಾನ ನಡೆಸಲಾಗುತ್ತಿದೆ. ಶಿವಮೊಗ್ಗದ ಜಿಲ್ಲೆಯ ಕಾರ್ಯಕ್ರಮಗಳಿಗೆ ರಾಜ್ಯಮಟ್ಟದ ಅನೇಕ ನಾಯಕರು ಭಾಗವಹಿಸಲಿದ್ದಾರೆ.ಕಡಿದಾಳು ಗೋಪಾಲ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ

ಎರಡು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಇದೇ ಕಾರಣಕ್ಕೆ ಜನ ಜೆಡಿಎಸ್‌ನತ್ತ ಮುಖ ಮಾಡುತ್ತಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದ ರಾಜಕೀಯ ಬೆಳವಣಿಗೆ, ನಾಗರಿಕರು ಅನುಭವಿಸುತ್ತಿರುವ ಕಷ್ಟಗಳ ಕುರಿತು ಮಾತನಾಡುತ್ತಿದ್ದಾರೆ. ಮಿಸ್ಡ್ ಕಾಲ್ ಅಭಿಯಾನದ ಮೂಲಕವು ಪಕ್ಷಕ್ಕೆ ಹೆಚ್ಚು ಜನರನ್ನು ಸಂಘಟಿಸಲಾಗುತ್ತಿದೆ.ಕೆ.ಬಿ.ಪ್ರಸನ್ನ ಕುಮಾರ್‌, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ

June-2025-Report-Shivamogga-Live-New-New.

ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ನಡೆಯುವ ಮೂರು ಕಾರ್ಯಕ್ರಮಕ್ಕೆ ಹೆಚ್ಚಿನ ಯುವಕರು ಆಗಮಿಸಲಿದ್ದಾರೆ.ಮಧುಕುಮಾರ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ

ಸುದ್ದಿಗೋಷ್ಠಿಯಲ್ಲಿ ಪ್ರಮಖರಾದ ದೀಪಕ್ ಸಿಂಗ್, ರಾಮಕೃಷ್ಣ, ತ್ಯಾಗರಾಜ್, ಸಂಗಯ್ಯ, ಗೀತಾ ಸತೀಶ್, ಅಬ್ದುಲ್ ವಾಜಿದ್ ಸೇರಿದಂತೆ ಹಲವರು ಇದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment