ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2023
SHIMOGA : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ರಚನೆಯಾಗಿದೆ. ಎಂಟು ಸಂಪುಟ ಸಚಿವರು (Minister) ಇವತ್ತು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯವರು ಒಬ್ಬರು ಸಚಿವರಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಈ ಮಧ್ಯೆ ಸಚಿವ ಸ್ಥಾನ ನೀಡದ್ದಕ್ಕೆ ಶಾಸಕ ಮಧು ಬಂಗಾರಪ್ಪ ಅವರು ಮುನಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಶಿವಮೊಗ್ಗಕ್ಕೆ ಸಿಗದ ಪ್ರಾತಿನಿಧ್ಯ
ಮೊದಲ ಸಂಪುಟದಲ್ಲಿ ಜಾತಿ, ಧರ್ಮವಾರು ಆದ್ಯತೆ ನೀಡಿದಂತೆ ಕಂಡು ಬಂದಿದೆ. ಪ್ರದೇಶವಾರು ಸಚಿವ (Minister) ಸ್ಥಾನ ನೀಡಿಲ್ಲ. ಮಧ್ಯೆ ಕರ್ನಾಟಕ ಭಾಗದ ಯಾವೊಬ್ಬ ಶಾಸರಿಗು ಸಚಿವ ಸ್ಥಾನ ಸಿಕ್ಕಿಲ್ಲ. ಈಚೆಗೆ ಎಲ್ಲ ಸರ್ಕಾರಗಳಲ್ಲು ಮೊದಲಿಗೆ ಶಿವಮೊಗ್ಗ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಒಲಿಯುತ್ತಿತ್ತು. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರಿಗೆ ಪ್ರಭಾವಿ ಖಾತೆ ಲಭಿಸಿತ್ತು. ಆದರೆ ಈ ಬಾರಿ ಮೊದಲ ಸಂಪುಟದಲ್ಲಿ ಶಿವಮೊಗ್ಗದ ಹೆಸರು ಇಲ್ಲವಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಮೂವರಲ್ಲಿ ಒಬ್ಬರಿಗಾದರೂ ಸಿಗಬಹುದು
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು ಶಾಸಕರಾಗಿದ್ದಾರೆ. ಭದ್ರಾವತಿಯ ಬಿ.ಕೆ.ಸಂಗಮೇಶ್ವರ್, ಸಾಗರದ ಬೇಳೂರು ಗೋಪಾಲಕೃಷ್ಣ, ಸೊರಬದ ಮಧು ಬಂಗಾರಪ್ಪ ಗೆದ್ದಿದ್ದಾರೆ. ಈ ಪೈಕಿ ಸಂಗಮೇಶ್ವರ್ ಮತ್ತು ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ದೊರೆಯಬಹುದು ಎಂಬ ಚರ್ಚೆಗಳಿವೆ. ಅವರ ಬೆಂಬಲಿಗರು, ಅಭಿಮಾನಿಗಳು ಈ ಬಗ್ಗೆ ಕಾತುರರಾಗಿದ್ದಾರೆ. ಕನಿಷ್ಠ ಒಬ್ಬರಿಗಾದರೂ ಪ್ರಭಾವಿ ಖಾತೆ (Minister) ಸಿಗುವ ಸಾಧ್ಯೆ ಇದೆ.
ಮುನಿಸಿಕೊಂಡರಾ ಮಧು ಬಂಗಾರಪ್ಪ?
ಸಚಿವ ಸ್ಥಾನ ನೀಡದ್ದಕ್ಕೆ ಮಧು ಬಂಗಾರಪ್ಪ ಅವರು ಬೇಸರಗೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೆ ಕಾರಣಕ್ಕೆ ಇವತ್ತು ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರು ಗೈರಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿಲ್ಲ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಾಗ್ತಾರೆ ಮಿನಿಸ್ಟರ್?
ಮುಂದೆ ಸಂಪುಟ ವಿಸ್ತರಣೆಯಾಗಲಿದೆ. ಈ ವೇಳೆ ಶಿವಮೊಗ್ಗದ ಶಾಸಕರು ಸಚಿವರಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಜನರು ಸಂಪುಟ ವಿಸ್ತರಣೆಯ ಕುರಿತು ಕಾತುರದಿಂದ ಇದ್ದಾರೆ.
ಹೊರಗಿನ ಉಸ್ತುವಾರಿಗಳು ಬೇಡ
ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಿ, ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಅನುಕೂಲ ಎಂಬ ಚರ್ಚೆಗಳಿವೆ. ಹೊರಗಿನವರು ಉಸ್ತುವಾರಿ ಸಚಿವರಾದರೆ ಇಲ್ಲಿಯ ಜನರ ಕಷ್ಟ, ನಷ್ಟಗಳು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ಜಿಲ್ಲೆಗೆ ಅವರ ಭೇಟಿಯು ಅಪರೂಪದ್ದಾಗಿರುತ್ತದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಸಿ.ನಾರಾಯಣ ಗೌಡ ಅವರು ಉಸ್ತುವಾರಿ ಸಚಿವರಾಗಿದ್ದರು. ಬೆರಳೆಣಿಕೆಯಷ್ಟು ಬಾರಿ ಮಾತ್ರ ಜಿಲ್ಲೆಗೆ ಬಂದಿದ್ದರು. ಅಲ್ಲದೆ ಯಾವುದೆ ವಿಚಾರಕ್ಕೆ ಒಪ್ಪಿಗೆ ನೀಡಲು ಸಂಸದ ರಾಘವೇಂದ್ರ, ಸಚಿವರಾಗಿದ್ದ ಈಶ್ವರಪ್ಪ ಅವರ ಒಪ್ಪಿಗೆ ಪಡೆಯುತ್ತಿದ್ದರು. ಹಾಗಾಗಿ ಜಿಲ್ಲೆಯವರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422