ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 DECEMBER 2023
SHIMOGA : ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಈ ಆದೇಶ ಜಾರಿಗೆ ಬರಲಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಶಿವಮೊಗ್ಗದ ಪದವೀಧರ ಸಹಕಾರ ಸಂಘದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾವುದೆ ಶಿಕ್ಷಣ ಸಂಸ್ಥೆಯಲ್ಲು ಮಕ್ಕಳ ಕೈಯಲ್ಲಿ ಶೌಚ ಸ್ವಚ್ಚತೆ ಮಾಡಿಸುವಂತಿಲ್ಲ. ಹಾಗೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇನ್ಮುಂದೆ ಶಾಲಾ ಸ್ವಚ್ಚತೆಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ. ಇನ್ನು, ಎಲ್ಲಾ ಶಾಲೆಯಲ್ಲೂ ಮುಂದಿನ ವರ್ಷದಿಂದ ಮಕ್ಕಳು ನೆಲದ ಮೇಲೆ ಕೂಳಿತು ಪಾಠ ಕೇಳುವಂತಿಲ್ಲ. 1 ರಿಂದ 10ನೇ ತರಗತಿ ವರೆಗೆ ಮಕ್ಕಳು ತರಗತಿಗಳಲ್ಲಿ ಬೆಂಚ್ ಮೇಲೆಯೇ ಕುಳಿತು ಪಾಠ ಕೇಳಬೇಕು. ಇದು ನಮ್ಮ ಇಲಾಖೆಯ ಆದೇಶ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೋಬೋ ರೇಸ್, ಹೇಗಿತ್ತು ರೇಸ್? ಇಲ್ಲಿದೆ ಫೋಟೊ ಸಹಿತ ವರದಿ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





