ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 APRIL 2023
SHIMOGA : ಜಿಲ್ಲೆಯಾದ್ಯಂತ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸು ಪಡೆದುಕೊಂಡಿದೆ. ಇವತ್ತು ಜಿಲ್ಲೆಯಲ್ಲಿ ವಿವಿಧ ಪಕ್ಷಗಳು ಮತ್ತು ಸ್ವತಂತ್ರವಾಗಿ 15 ಅಭ್ಯರ್ಥಿಗಳು ನಾಮಪತ್ರ (Nomination) ಸಲ್ಲಿಸಿದ್ದಾರೆ. ಇವತ್ತು 26 ನಾಮಪತ್ರ ಸಲ್ಲಿಕೆಯಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
ಭದ್ರಾವತಿ ವಿಧಾನಸಭೆ ಕ್ಷೇತ್ರ
ಜನತಾ ದಳ (ಸಂಯುಕ್ತ) ಪಕ್ಷದ ಶಶಿಕುಮಾರ್.ಬಿ.ಕೆ ಅವರು ಇತ್ತು ನಾಮಪತ್ರ (Nomination) ಸಲ್ಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪಕ್ಷೇತರ ಅಭ್ಯರ್ಥಿಯಾಗಿ ಬಿ.ಎನ್.ನಾಗರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗ ವಿಧಾನಸಭೆ ಕ್ಷೇತ್ರ
ಆಮ್ ಆದ್ಮಿ ಪಕ್ಷದ ನೇತ್ರಾವತಿ.ಟಿ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ಅವರು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ
ಜನತಾದಳ ಪಕ್ಷದಿಂದ ರಾಜಾರಾಂ ಹೆಗ್ಡೆ ವೈ.ವಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಕಿರಣ್ ಕುಮಾರ್.ಹೆಚ್.ಬಿ ನಾಮಪತ್ರ ಸಲ್ಲಿಸಿದ್ದಾರೆ.
ಶಿಕಾರಿಪುರ ವಿಧಾನಸಭೆ ಕ್ಷೇತ್ರ
ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಇವತ್ತು ನಾಮಪತ್ರ ಸಲ್ಲಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿಯ ರವಿ ನಾಯ್ಕ್.ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ನಾಗನಗೌಡ.ಎಸ್.ಪಿ ಅವರ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಗಣೇಶ್.ಆರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಸೊರಬ ವಿಧಾನಸಭೆ ಕ್ಷೇತ್ರ
ಬಿಜೆಪಿ ಅಭ್ಯರ್ಥಿಯಾಗಿ ಎಸ್.ಕುಮಾರ್ ಬಂಗಾರಪ್ಪ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಸಾಗರ ವಿಧಾನಸಭೆ ಕ್ಷೇತ್ರ
ಕಾಂಗ್ರೆಸ್ ಪಕ್ಷದಿಂದ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷದಿಂದ ಸೋಮರಾಜ್.ಎನ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಚುನಾವಣೆಗೆ ಅಭ್ಯರ್ಥಿ ಎಷ್ಟು ಹಣ ಖರ್ಚು ಮಾಡಬಹುದು? ಸಂವಾದಲ್ಲಿ ಶಿವಮೊಗ್ಗ ಡಿಸಿ ಹೇಳಿದ್ದೇನು?
CLICK HERE TO JOIN SHIVAMOGGA LIVE WHATSAPP GROUP[/su_animate