SHIMOGA : ನಾಮಪತ್ರ ಸಲ್ಲಿಕೆಗೆ ಇನ್ನೊಂದೆ ದಿನ ಬಾಕಿ. ಈತನಕ ಬಿಜೆಪಿ ಶಿವಮೊಗ್ಗದ ಅಭ್ಯರ್ಥಿ ಕುರಿತ ಸಸ್ಪೆನ್ಸ್ ಮುಂದುವರೆಸಿದೆ. ಈ ಮಧ್ಯೆ ನಾಮಪತ್ರ (nomination time) ಸಲ್ಲಿಕೆ ಸಮಯ, ಮೆರವಣಿಗೆ ಹಾದಿ ಕುರಿತು ಬಿಜೆಪಿ ಪ್ರಕಟಣೆ ಹೊರಡಿಸಿದೆ.
ಅಭ್ಯರ್ಥಿ ಘೋಷಣೆಗು ಮೊದಲೆ ಬಿಜೆಪಿ ನಾಮಪತ್ರ ಸಲ್ಲಿಸುವ ಮೆರವಣಿಗೆಗೆ ಸಿದ್ಧತೆ ಮಾಡಿಕೊಂಡಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ಕೋಟೆ ರಸ್ತೆ, ಗಾಂಧಿ ಬಜಾರ್ ಮೂಲಕ ಎನ್.ಡಿ.ವಿ ಹಾಸ್ಟೆಲ್ ಆವರಣ ತಲುಪಲಾಗುತ್ತದೆ. ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ ಎಂದು ಬಿಜೆಪಿ ನಗರ ಅಧ್ಯಕ್ಷ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದುವರೆದ ಕುತೂಹಲ
ಶಿವಮೊಗ್ಗ ಸೇರಿದಂತೆ ರಾಜ್ಯದ ಎರಡು ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಏ.20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆದರೆ ಬಿಜೆಪಿ ಅಭ್ಯರ್ಥಿ ಘೋಷಿಸದೆ ಇರುವುದು ತೀವ್ರ ಕುತೂಹಲ ಮತ್ತು ಗೊಂದಲ ಮೂಡಿಸಿದೆ. ಇನ್ನೊಂದೆಡೆ ಬಿಜೆಪಿ ನಡೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ