ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗಿದೆ. ಇದು ಸರ್ವ ಪಕ್ಷದ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಬಿಜೆಪಿಯೊಳಗೆ ಆಕಾಂಕ್ಷಿಗಳ ಆಕ್ರೋಶ ದುಪ್ಪಟ್ಟಾಗಿದೆ.
ಚುನಾವಣಾ ಆಯೋಗ ಕರಡು ಮೀಸಲಾತಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ. ಈ ನಡುವೆ ಹಲವು ಹಾಲಿ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲದಂತಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಶಾಸಕರು ಕೂಡ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆಯೋಗದ ಮೀಸಲಾತಿಗೆ ಹಾಲಪ್ಪ ಬೇಸರ
ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಚುನಾವಣಾ ಆಯೋಗ ಪ್ರಕಟಿಸಿರುವ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ.
‘ಜಿ.ಪಂ ಮತ್ತು ತಾ.ಪಂ ಚುನಾವಣೆ ಮೀಸಲಾತಿ ಕರಡು ಅಧಿಸೂಚನೆ ಪ್ರಕಟವಾಗಿದ್ದು. ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿ ಕಂಡುಬರುತ್ತಿದೆ. ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 ಎಸ್.ಟಿ ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421 ಎಸ್.ಟಿ. ಮತದಾರರಿರುವ ಕುದುರೂರು ಮತ ಕ್ಷೇತ್ರಕ್ಕೆ ನೀಡಲಾಗಿದೆ. ಇದರಲ್ಲಿ ಕಾಣದ ಕೈಗಳು ಕೈಯಾಡಿಸಿರುವ ಹಾಗಿದೆ. ಈ ಅವೈಜ್ಞಾನಿಕ ಮೀಸಲಾತಿ ಬಗ್ಗೆ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಚರ್ಚಿಸಲಾಗುವುದು’ ಎಂದು ಹರತಾಳು ಹಾಲಪ್ಪ ಬರೆದುಕೊಂಡಿದ್ದಾರೆ.
ಶಾಸಕರ ವಿರುದ್ಧವೇ ಗುಡುಗು
ಮತ್ತೊಂದೆಡೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರ್ ಅವರು, ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಅನ್ಯಾಯವಾದರೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಅವರೆ ಹೊಣೆ ಎಂದು ಆರೋಪಿಸಿದ್ದಾರೆ. ಈ ನಡುವೆ ಶಾಸಕ ಅಶೋಕ್ ನಾಯ್ಕ್ ಅವರು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ಪಟ್ಟಿ ಪ್ರಕಟ ವಿಚಾರ ಬಿಜೆಪಿಯೊಳಗೆ ಮುನಿಸಿಗೆ ಕಾರಣವಾಗಿರುವುದು ನಿಶ್ಚಿತವಾಗಿದೆ.
ಅಸಮಾಧಾನದ ವಿಡಿಯೋ ವರದಿ ಇಲ್ಲಿದೆ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422