SHIVAMOGGA LIVE NEWS | 16 AUGUST 2023
SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್ಹುಕುಂ (Bagar Hukum) ಸಾಗುವಳಿದಾರರ ಭೂ ಒಡೆತನಕ್ಕೆ ಸಂಬಂಧಿಸಿದಂತೆ ಬಹು ಸಮಯದಿಂದ ಕಗ್ಗಂಟಾಗಿರುವ ಸಮಸ್ಯೆ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದರು
ಇದನ್ನೂ ಓದಿ- ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?
ಈ ವಿಷಯ ಸಂಬಂಧ ಹೆಚ್ಚುವರಿ ಅಡ್ವೊಕೇಟ್ ಜನರಲ್, ಪ್ರಮುಖ ಅಧಿಕಾರಿಗಳು, ತಜ್ಞರ ಜೊತೆಗೆ ಹಲವು ಸುತ್ತಿನ ಸಭೆ ನಡೆಸಿ, ಸಮಾಲೋಚನೆ ಮಾಡಲಾಗಿದೆ. ರೈತರ ಹಿತ ಕಾಯುವ ವಿಚಾರದಲ್ಲಿ ಅಗತ್ಯವಿದ್ದಲ್ಲಿ ಕಾನೂನು ಸಮರಕ್ಕು ಸರ್ಕಾರ ಸಿದ್ಧ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಇದ್ದರು.