ಶಿವಮೊಗ್ಗ ಲೈವ್.ಕಾಂ | SHIMOGA | 17 ಡಿಸೆಂಬರ್ 2019
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾ ಕಾಂಗ್ರೆಸ್’ಗೆ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಅನುಮತಿ ಕೋರಿದ್ದರು ಪೊಲೀಸ್ ಅಧಿಕಾರಿಗಳು ಕರೆಮಾಡಿ ಪ್ರತಿಭಟನೆ ನಡೆಸದಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆಪಾದಿಸಿದರು.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆ ಅನುಮತಿ ನೀಡದೇ ಇದ್ದರೂ ಡಿಸೆಂಬರ್ 19ರಂದು ಪ್ರತಿಭಟನೆ ನಡೆಸಿಯೇ ತೀರುವುದಾಗಿ ಸುಂದರೇಶ್ ತಿಳಿಸಿದರು.
ಮಾಜಿ ಶಾಸಕರಾದ ಪ್ರಸನ್ನಕುಮಾರ್, ಹೆಚ್.ಎಂ.ಚಂದ್ರಶೇಖರಪ್ಪ, ಪ್ರಮುಖರಾದ ವಿಶ್ವನಾಥ್ ಕಾಶಿ, ಕಾರ್ಪೊರೇಟರ್ ಯಮುನಾ ರಂಗೇಗೌಡ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Shimoga District unit president H S Sundaresh alleged that police are not permitting them to protest against Central Government.