ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 APRIL 2024
ELECTION NEWS : ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದಿದೆ. ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳತ್ತ ರಾಜಕೀಯ ಪಕ್ಷಗಳು ಕಣ್ಣು ನೆಟ್ಟಿವೆ. ಈ ಪೈಕಿ ಶಿವಮೊಗ್ಗ ಕ್ಷೇತ್ರ ಅತ್ಯಂತ ಪ್ರಮುಖದ್ದಾಗಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಮತ್ತು ಮಾಜಿ ಉಪ ಮುಖ್ಯಮಂತ್ರಿ ನಡುವೆ ಜಿದ್ದಾಜಿದ್ದಿ ಇದೆ. ಹಾಗಾಗಿಯ ಘಟಾನುಘಟಿ ನಾಯಕರು, ಸೆಲೆಬ್ರಿಟಿಗಳು ಪ್ರಚಾರ ಕಾರ್ಯಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.
ಸೋಮವಾರದಿಂದಲೇ ಘಟಾನುಘಟಿಗಳ ಎಂಟ್ರಿ
ಶಿವಮೊಗ್ಗ ಕ್ಷೇತ್ರಕ್ಕೆ ಸೋಮವಾರ ಘಟಾನುಘಟಿಗಳು ಭೇಟಿ ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಹೊಟೇಲ್ ಒಂದರಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಆ ಬಳಿಕ ಪ್ರಚಾರ, ಸಭೆಗಳನ್ನು ನಡೆಸುವ ಸಾಧ್ಯತೆ ಇದೆ. ಇನ್ನು, ಕಾಂಗ್ರೆಸ್‌ನ ಫೈರ್ ಬ್ರಾಂಡ್, ಸಚಿವ ಸಂತೋಷ್ ಲಾಡ್ ಭೇಟಿ ನೀಡುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.
ರಾಜ್ಯ, ರಾಷ್ಟ್ರಮಟ್ಟದ ನಾಯಕರು
ಅಭ್ಯರ್ಥಿಗಳ ಪ್ರಚಾರಕ್ಕೆ ಶಿವಮೊಗ್ಗಕ್ಕೆ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಆಗಮನ ಪಕ್ಕಾ ಆಗಿದೆ. ಮತ್ತಷ್ಟು ನಾಯಕರು ಶಿವಮೊಗ್ಗಕ್ಕೆ ಭೇಟಿ ನೀಡಿ, ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ಪ್ರಚಾರಕ್ಕೆ ಧುಮುಖಲಿದ್ದಾರೆ ಸೆಲೆಬ್ರಿಟಿಗಳು
ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಕ್ಷೇತ್ರದಾದ್ಯಂತ ಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ಮತ್ತಷ್ಟು ಸೆಲಬ್ರಿಟಿಗಳು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಸಿನಿಮಾ ನಟರಾದ ದುನಿಯಾ ವಿಜಯ್, ಧ್ರುವ ಸರ್ಜಾ, ಅಜಯ್ ರಾವ್, ಡಾಲಿ ಧನಂಜಯ, ಚಂದನ್ ಶೆಟ್ಟಿ, ಅನುಶ್ರೀ ಸೇರಿದಂತೆ ಹಲವರು ಶಿವಮೊಗ್ಗಕ್ಕೆ ಸಾಲು ಸಾಲಾಗಿ ಬಂದು ಪ್ರಚಾರ ನಡೆಸಲಿದ್ದಾರೆ.
ಸದ್ಯ ಶಿವಮೊಗ್ಗ ಲೋಕಸಭೆ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಇದೇ ಕಾರಣಕ್ಕೆ ಘಟಾನುಘಟಿಗಳು ಇಲ್ಲಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇದು ಮತದಾರರಲ್ಲಿ ಕುತೂಹಲ ಮೂಡಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಮುಂದಿನ 5 ದಿನ ಹೇಗಿರುತ್ತೆ ತಾಪಮಾನ? ಯಾರಿಗೆಲ್ಲ ಎಷ್ಟು ಸಮಸ್ಯೆಯಾಗಿದೆ?
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














