ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 MAY 2023
SHIMOGA : ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್‌ಗಳ (Postal Ballot) ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆ ನಡೆಯುತ್ತಿದೆ.
ಏನಿದು ಪೋಸ್ಟಲ್ ಬ್ಯಾಲೆಟ್?
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಪೋಸ್ಟಲ್ ಬ್ಯಾಲೆಟ್ ಮೂಲಕ ತಮ್ಮ ಹಕ್ಕು ಚಲಾಯಿಸಲು ಅವಕಾಶವಿರುತ್ತದೆ. ರಾಜ್ಯದ ಯಾವುದೆ ಭಾಗದಲ್ಲಿರುವ ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳು, ಅಲ್ಲಿಯೇ ತಮ್ಮ ಹಕ್ಕು ಚಲಾಯಿಸಬಹುದಾಗಿದೆ. ಈ ಮತಗಳನ್ನು ಪೋಸ್ಟಲ್ ಬ್ಯಾಲೆಟ್ (Postal Ballot) ಎನ್ನಲಾಗುತ್ತದೆ. ಅವುಗಳನ್ನು ಒಟ್ಟುಗೂಡಿಸಿ ಎಣಿಕೆ ಮಾಡಲಾಗುತ್ತದೆ.
ಇದನ್ನೂ ಓದಿ – RESULTS LIVE | ಶಿವಮೊಗ್ಗ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ನೇರ ಪ್ರಸಾರ
ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೆ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಪತ್ರಕರ್ತರು ಕೂಡ ಪೋಸ್ಟಲ್ ಬ್ಯಾಲೆಟ್ ಮೂಲಕ ತಮ್ಮ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ