ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಹರ್ಷ ಹತ್ಯೆ ಪ್ರಕರಣ ಮತ್ತು ಆ ಬಳಿಕ ನಡೆದ ಅಹಿತಕರ ಘಟನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊಣೆ ಹೊರಬೇಕು. ನಗರದಲ್ಲಿ ಆಗಿರುವ ನಷ್ಟವನ್ನು ಅವರೆ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನಕುಮಾರ್ ಅವರು, ಜಿಲ್ಲೆಯ ಶಾಂತಿ ಸುವ್ಯವಸ್ಥೆ ಜೊತೆ ಸಚಿವ ಈಶ್ವರಪ್ಪ ಅವರು ಆಟವಾಡುತ್ತಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದಲೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪ ಅವರ ನಡೆ ಖಂಡನೀಯ. ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದವರು ಯಾರೂ ನಮ್ಮ ಜಿಲ್ಲೆಯವರಲ್ಲ ಎಂದು ಸಚಿವ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ. ಸಚಿವರಿಗೆ ಮೊದಲೇ ಮಾಹಿತಿ ಇದ್ದರೆ ಅದನ್ನು ಏಕೆ ಪೊಲೀಸ್ ಇಲಾಖೆಗೆ ತಿಳಿಸಲಿಲ್ಲ. ಅವರ ಹೇಳಿಕೆಗಳು ಕೂಡ ಪ್ರಚೋದನಕಾರಿಯಾಗಿವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆಗಳನ್ನು ನೀಡಬಾರದು ಎಂದರು.
ಹಿಂದೂಗಳ ರಕ್ಷಣೆಗೆ ನಮಗೆ ಮತ ನೀಡಿ ಎಂದು ಕೇಳಿಕೊಂಡಿದ್ದರು. ಈಗ ಅವರ ಜೊತೆಗಿದ್ದವರೆ ಹತ್ಯೆಯಾಗಿದ್ದಾರೆ. ಹರ್ಷನಿಗೆ ಜೀವ ಬೆದರಿಕೆ ಇತ್ತು ಎಂದು ಆತನ ತಾಯಿ ತಿಳಿಸಿದ್ದಾರೆ. ಆವರಿಗೆ ರಕ್ಷಣೆ ನೀಡಲು ಆಗಲಿಲ್ಲ ಎಂದ ಮೇಲೆ ನಾಗರಿಕರನ್ನು ಕಾಪಡಲು ಸಾದ್ಯವೆ ಎಂದು ಪ್ರಸನ್ನಕುಮಾರ್ ಅವರು ಪ್ರಶ್ನಿಸಿದರು.
ಹತ್ಯೆ ಮತ್ತು ಆನಂತರದ ಘಟನೆಗಳ ಸಂಬಂಧ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಸಚಿವ ಈಶ್ವರಪ್ಪ ಅವರೆ ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಅದು ಬಾಯಿ ಮಾತಿಗೆ ಸೀಮಿತವಾಗಬಾರದು. ಎಲ್ಲವೂ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಪ್ರಕ್ಷದ ಪ್ರಮುಖರಾದ ದೀಪಕ್ ಸಿಂಗ್, ಶ್ಯಾಮ ಸುಂದರ್, ರಘು ಉಪಸ್ಥಿತರಿದ್ದರು.