ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 APRIL 2024
POLITICAL NEWS : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಜಿಲ್ಲಾಧ್ಯಕ್ಷರಾಗಿದ್ದರು
ಈವರೆಗೂ ಹೆಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಈಚೆಗೆ ಸುಂದರೇಶ್ ಅವರನ್ನು ಸೂಡ ಅಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. ಈ ಹಿನ್ನೆಲೆ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗಿದೆ. ಆರ್.ಪ್ರನಸ್ನ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈ ಹಿಂದೆ ಶಿವಮೊಗ್ಗ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಅನುಭವ ಹೊಂದಿದ್ದಾರೆ.
ಇದನ್ನೂ ಓದಿ – ‘ಬಿಜೆಪಿಯ ರಾಘವೇಂದ್ರ ನಾಳೆ ಬಾ ಗಿರಾಕಿ’, ಶಿವಮೊಗ್ಗದಲ್ಲಿ ಕಾಂಗ್ರೆಸ್ ವಕ್ತಾರ ವ್ಯಂಗ್ಯ, ಕಾರಣವೇನು?
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















