| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020
ಪ್ರತಿ ವಾರ್ಡ್, ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಇವತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞಾ ದಿನ ನಡೆಯಿತು. ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಕಡೆಯಲ್ಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ನಡೆಯಿತು.

ಶಿವಮೊಗ್ಗದ ಮಹಾನಗರ ಪಾಲಿಕೆಯ ವಾರ್ಡುಗಳು, ಎಲ್ಲಾ ತಾಲೂಕಿನ ನಗರಾಡಳಿತ ವ್ಯಾಪ್ತಿಯ ವಾರ್ಡುಗಳು, ಗ್ರಾಮ ಪಂಚಾಯಿತಿ ಹಂತದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮ ನಡೆಯಿತು. ಒಂದು ಟಿವಿಯಲ್ಲಿ ಪ್ರತಿಜ್ಞಾ ದಿನದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆಯಾಗಿತ್ತು. ಮತ್ತೊಂದು ಟಿವಿಯಲ್ಲಿ ಸ್ಥಳೀಯ ನೇರ ಪ್ರಸಾರವನ್ನು ಗಮನಿಸಲು ಅವಕಾಶ ಕಲ್ಪಿಸಲಾಗಿತ್ತು.
ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್
ಶಿವಮೊಗ್ಗ ನಗರದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪೆಂಡಾಲ್ ಹಾಕಿಸಿ, ಪ್ರತಿಜ್ಞಾ ದಿನದ ಕಾರ್ಯಕ್ರಮದ ನೇರ ವೀಕ್ಷನೆ ಮಾಡಿದರು.

ಕೈ ಕೊಟ್ಟ ಕರೆಂಟ್, ಆಕ್ರೋಶ
ಮತ್ತೊಂದೆಡ ಕೆಲವು ಕಡೆ ವಿದ್ಯುತ್ ಕೈಕೊಟ್ಟಿದೆ. ಇದರಿಂದ ನೇರ ಪ್ರಸಾರ ವೀಕ್ಷಿಸಲು ಸಾದ್ಯವಾಗದೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯ ಕುಡುಮಲ್ಲಿಗೆ, ಮಂಡಗದ್ದೆ, ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿ ಕೆಲವು ಕಡೆ ವಿದ್ಯುತ್ ವ್ಯತ್ಯಯವಾಗಿದೆ.

ಇದರ ಹಿಂದೆ ಕಿಡಿಗೇಡಿಗಳ ಕೈವಾಡ ಇದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ವ್ಯತ್ಯಯವಾದರೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()