ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 MARCH 2024
SHIMOGA : ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೆ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು, ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ.
ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ – ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ಬಗ್ಗೆ ನಿಮಗೆಷ್ಟು ಗೊತ್ತು? ಮೊದಲ ರೈಲು ಬಂದಿದ್ದು ಯಾವಾಗ? ಈಗ ದಿನ ಎಷ್ಟು ಪ್ರಯಾಣಿಕರು ಓಡಾಡ್ತಿದ್ದಾರೆ?
‘ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಸಭೆ ಆಯೋಜಿಸುವ ಸಾಧ್ಯತೆ ಇದೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆʼ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















