SHIVAMOGGA LIVE NEWS | 11 MARCH 2024 (ಈ ಸುದ್ದಿಯನ್ನು ಇನ್ನು 43 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
SHIMOGA : ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೆ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು, ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ.
ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ – ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ಬಗ್ಗೆ ನಿಮಗೆಷ್ಟು ಗೊತ್ತು? ಮೊದಲ ರೈಲು ಬಂದಿದ್ದು ಯಾವಾಗ? ಈಗ ದಿನ ಎಷ್ಟು ಪ್ರಯಾಣಿಕರು ಓಡಾಡ್ತಿದ್ದಾರೆ?
‘ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಸಭೆ ಆಯೋಜಿಸುವ ಸಾಧ್ಯತೆ ಇದೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆʼ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
