ಗಾಂಜಾ, ಇಸ್ಪೀಟು, ಕೊಲೆ, ದರೋಡೆ ಹೆಚ್ಚಳ, ಶಿವಮೊಗ್ಗ ಬಸ್ ನಿಲ್ದಾಣದ ಮುಂದೆ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021

ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮತ್ತು ಅಪರಾಧ ಚಟುವಟಿಕೆ ಏರಿಕೆಯಾಗಿದೆ. ಪೊಲೀಸ್ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇವುಗಳನ್ನು ನಿಯಂತ್ರಿಸುವಲ್ಲಿ ಗೃಹ ಸಚಿವರು ವಿಫಲವಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಶಿವಮೊಗ್ಗ ಬಸ್ ನಿಲ್ದಾಣದ ಮುಂಭಾಗದ ಅಶೋಕ ಸರ್ಕಲ್’ನಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗಾಂಜಾ, ಇಸ್ಪೀಟು, ಕಳ್ಳತನ, ದರೋಡೆ

ಕಳೆದ ಕೆಲವು ತಿಂಗಳಿಂದ ಈಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಹೇರಳವಾಗಿ ಸಿಗುತ್ತಿದೆ. ಇಸ್ಪೀಟ್ ದಂಧೆ, ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಳವಾಗಿದೆ. ಇದರ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಇದು ಗೃಹ ಸಚಿವರ ವೈಫಲ್ಯಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾದ್ಯಂತ ಗಾಂಜಾ ಸಿಗುತ್ತಿದೆ. ಆಂಧ್ರದಿಂದಲೂ ಗಾಂಜಾ ಬರುತ್ತಿದೆ. ಇವುಗಳನ್ನು ನಿಯಂತ್ರಿಸಲು ಪೊಲೀಸರಿಗೆ ಸೂಕ್ತ ಸೌಲಭ್ಯ ಒದಗಿಸುತ್ತಿಲ್ಲ. ಇದು ಗೃಹ ಸಚಿವರ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಗಾಂಜಾ ಹಾವಳಿ ಹೆಚ್ಚಳವಾಗಿದೆ. ಇದೆ ಕಾರಣಕ್ಕೆ ಮಕ್ಕಳನ್ನು ಕಾಲೇಜು ಬಿಡಿಸಲು ಪೋಷಕರು ಮುಂದಾಗಿದ್ದಾರೆ. ಈ ಸಂಬಂಧ  ತಮಗೆ ದೂರು ನೀಡುತ್ತಿದ್ದಾರೆ. ಗಾಂಜಾ ಹಾವಳಿಯಿಂದಾಗಿ ಶಿವಮೊಗ್ಗದಲ್ಲಿ ಕೊಲೆ, ದರೋಡೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವರ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಿಪಡಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣ ನೆಲೆಸುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ಆರ್.ಪ್ರಸನ್ನಕುಮಾರ್, ಹೆಚ್.ಎಂ.ಚಂದ್ರಶೇಖರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2021

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment