NEWS HIGHLIGHTS
ಶಿವಮೊಗ್ಗ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪು ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೂ, ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ದೂರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಎಲ್ಲ ರೀತಿಯ ಕಠಿಣ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರಿಗೆ 10 ಕೋಟಿ ರೂ. ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಚಿಂತನೆಯೂ ಇದೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆಯಾದ ತಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಮರುಪರೀಕ್ಷೆ ನಡೆಸಲಾಗಿದೆ ಮತ್ತು ಫಲಿತಾಂಶವೂ ಬಂದಿದೆ. ವಿದ್ಯಾರ್ಥಿಗಳು ತಮ್ಮ ಜೀವನವನ್ನು ಕಟ್ಟಿಕೊಂಡಿದ್ದರೂ, ಈಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದೆ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ಅವರು ಟೀಕಿಸಿದರು.