SHIVAMOGGA LIVE NEWS | 2 MAY 2024
ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಅವರ ಮೂಲಕ ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ಸಾವು ಬಯಸುತ್ತಿದೆ. ಪ್ರಧಾನಿ ಮೋದಿ ಅವರಿಗೆ ಆರೋಗ್ಯ, ಹೆಚ್ಚಿನ ಆಯಸ್ಸು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ ಎಂದರು.
ಇನ್ನು, ಈ ಬಾರಿ ಲೀಡ್ ಕಡಿಮೆಯಾದರೆ ಕರೆಂಟ್ ಕಡಿತಗೊಳಿಸುವುದಾಗಿ ಶಾಸಕ ರಾಜು ಕಾಗೆ ಹೇಳಿದ್ದಾರೆ. ಇಂತಹ ದಬ್ಬಾಳಿಕೆಯ ಮಾತನ್ನಾಡಲು ಇದು ತುರ್ತು ಪರಿಸ್ಥಿತಿಯ ಕಾಲವಲ್ಲ. ಇದರ ವಿರುದ್ಧ ಚುನಾವಣ ಆಯೋಗಕ್ಕೆ ದೂರು ನೀಡಲಾಗುತ್ತದೆ. ಈ ಹೇಳಿಕೆಗಳ ಹಿನ್ನೆಲೆ ಶಾಸಕ ರಾಜು ಕಾಗೆ ಮತ್ತು ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದವರಿಗೆ ಅಭಿವೃದ್ಧಿ ವಿಚಾರದಲ್ಲಿ ಮಾತನಾಡಲು ಯಾವುದೆ ವಿಷಯಗಳಿಲ್ಲ. ಗ್ಯಾರಂಟಿ ವಿಚಾರವನ್ನು ಮಾತ್ರ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲ್ಲಿದೆ ಎಂದು ಆಂತರಿಕ ಮಾಹಿತಿ ಗೊತ್ತಾಗಿದೆ. ಆದ್ದರಿಂದ ಈಗ ಹಗುರ ಮಾತುಗಳನ್ನು ಆಡುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಹುಲ್ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್, ಹೇಗಿದೆ ಭದ್ರತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200