ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮತದಾರರತ್ತ ಬಿಜೆಪಿ ಕಣ್ಣು ಹಾಯಿಸಿದೆ. ಖಾಸಗಿ ಹೊಟೇಲ್ನಲ್ಲಿ ಶಿವಮೊಗ್ಗ ಮತದಾರರ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇನ್ನು, ಶಿವಮೊಗ್ಗ ಮತದಾರರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಯಾರೆಲ್ಲ ಏನೇನು ಹೇಳಿದರು?
ಬಿ.ವೈ.ರಾಘವೇಂದ್ರ, ಸಂಸದ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಎಲ್ಲ ಕ್ಷೇತ್ರದಲ್ಲಿ ಪ್ರಜ್ವಲಿಸುತ್ತಿದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಅಖಂಡ ಭಾರತ ನಿರ್ಮಾಣ ಕನಸು ನನಸು ಮಾಡುತ್ತಾರೆ. ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಂಘಟನೆ ಅವಕಾಶ ನೀಡಿದೆ. ಮಾಜಿ ಪ್ರಧಾನಿ ದೇವೇಗೌಡ ಅವರು ಬೆಂಬಲ ಘೋಷಿಸಿದ್ದಾರೆ. ಚುನಾವಣೆ ಬಳಿಕವು ಎಲ್ಲರು ಸೇರಿ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ನಡೆಸೋಣ. ಇನ್ನು ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ. ಏ.18ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮ ಸೇರಿದಂತೆ ಹಲವು ಮುಖಂಡು ಭಾಗವಹಿಸಲಿದ್ದಾರೆ.
ಕಡಿದಾಳು ಗೋಪಾಲ್, ಜೆಡಿಎಸ್ ಜಿಲ್ಲಾಧ್ಯಕ್ಷ : ಬಿ.ವೈ.ರಾಘವೇಂದ್ರ ಅವರು ಹತ್ತು ವರ್ಷದಲ್ಲಿ ಸಾವಿರಾರು ಕೋಟಿ ರೂ. ಮೊತ್ತದ ಯೋಜನೆಗಳನ್ನು ಶಿವಮೊಗ್ಗಕ್ಕೆ ತಂದಿದ್ದಾರೆ. ಜಿಲ್ಲೆಯಲ್ಲಿರುವ ಜೆಡಿಎಸ್ ಪಕ್ಷದ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳು ರಾಘವೇಂದ್ರ ಅವರಿಗೆ ಸಿಗಲಿದೆ.
ಆರಗ ಜ್ಞಾನೇಂದ್ರ, ಶಾಸಕ : ರಾಘವೇಂದ್ರ ಸಂಸದರಾಗಿ ಐಷಾರಾಮಿಯಾಗಿಲ್ಲ. ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿಯೇ ಸಾವಿರಾರು ಕೋಟಿ ರೂ. ಅಭಿವೃದ್ಧಿಯಾಗಿದೆ. ಯಾರ ಟೀಕೆಗೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ.
ಹರತಾಳು ಹಾಲಪ್ಪ, ಮಾಜಿ ಶಾಸಕ : ಬಿಜೆಪಿಗೆ ಈ ಹಿಂದೆ ಹೋರಾಟದ ದಿನಗಳಾಗಿದ್ದವು. ಈಗ ಭಾರತವನ್ನು ಅಭಿವೃದ್ಧಿಪಡಿಸುವ ದಿನಗಳಾಗಿವೆ. ಶಿವಮೊಗ್ಗದಲ್ಲಿಯು ಅಭಿವೃದ್ಧಿ ದಿನಗಳನ್ನು ಕಾಣುತ್ತಿದ್ದೇವೆ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ : ಶಿವಮೊಗ್ಗಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕೇವಲ ಮತದಾರರಲ್ಲ. ಅವರು ನೂರಾರು ಮತಗಳ ಬದಲಾವಣೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಕುರಿತು ಚರ್ಚೆಯಾಗುತ್ತಿದೆ. ಇಂದಿರಾ ಗಾಂಧಿ ಕಾಲದಲ್ಲಿ ಗರೀಬಿ ಹಠಾವೋ ಘೋಷಿದ್ದರು. ಕಾಂಗ್ರೆಸ್ ಮುಖಂಡರ ಗರೀಬಿ ಹಠಾವೋ ಆಯಿತಷ್ಟೆ. ಈಗ ಗ್ಯಾರಂಟಿಯ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಲು ಹೊರಟಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ, ಶಾಸಕ ಚನ್ನಬಸಪ್ಪ ಅವರು, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಮಂಜುಳಾ, ದತ್ತಾತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – ಹೊಸನಗರದ ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮವಿರಲಿದೆ?