ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JUNE 2024

RESULT NEWS : ಸೋಲರಿಯದ ಸರದಾರ ಎಸ್‌.ಬಂಗಾರಪ್ಪ ಅವರನ್ನು ತಮ್ಮ ಮೊದಲ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಸೋಲಿಸಿದ್ದರು. ಆ ನಂತರ ಬಂಗಾರಪ್ಪ ಪುತ್ರ ಮತ್ತು ಪುತ್ರಿಯಲ್ಲಿ ಸೋಲಿಸಿ ಅಪರೂಪದ ದಾಖಲೆ (Record) ಬರೆದಿದ್ದಾರೆ.

ಯಡಿಯೂರಪ್ಪ ಕುಟುಂಬ V/S ಬಂಗಾರಪ್ಪ ಕುಟುಂಬ

ಶಿವಮೊಗ್ಗದಲ್ಲಿ ನಡೆದ ಕಳೆದ ಐದು ಲೋಕಸಭೆ ಚುನಾವಣೆ ಯಡಿಯೂರಪ್ಪ ಕುಟುಂಬ ಮತ್ತು ಬಂಗಾರಪ್ಪ ಕುಟುಂಬ ನೇರಾನೇರ ಮುಖಾಮುಖಿಯಾಗಿವೆ. ಎಲ್ಲದರಲ್ಲು ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಜೈತ್ರಯಾತ್ರೆ ಮುಂದುವರೆಸಿಕೊಂಡು ಬಂದಿದ್ದಾರೆ. ಐದು ಚುನಾವಣೆಗಳ ಪೈಕಿ ಬಂಗಾರಪ್ಪ ಮತ್ತು ಯಡಿಯೂರಪ್ಪ ಸ್ಪರ್ಧಿಸಿದ್ದು ಕೇವಲ ಒಂದು ಚುನಾವಣೆಯಲ್ಲಿ ಮಾತ್ರ.

ರಾಘವೇಂದ್ರ ಅಪರೂಪದ ದಾಖಲೆ

ಲೋಕಸಭೆ ಚನಾವಣೆಯಲ್ಲಿ ಈಗ ಬಿ.ವೈ.ರಾಘವೇಂದ್ರ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆ ಅಖಾಡದಲ್ಲಿ, ಬಂಗಾರಪ್ಪ, ಪುತ್ರ ಮಧು ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಸೋಲಿಸಿದ ಅಪರೂಪದ ದಾಖಲೆ ಬರೆದಿದ್ದಾರೆ.

point-12009ರಲ್ಲಿ ಬಿ.ವೈ.ರಾಘವೇಂದ್ರ ಮೊದಲ ಬಾರಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಪಕ್ಷದಿಂದ ಎಸ್.ಬಂಗಾರಪ್ಪ ಎದುರಾಳಿ ಆಗಿದ್ದರು. ಆಗ ರಾಘವೇಂದ್ರ 4,82,783 ಮತ ಪಡೆದಿದ್ದರು. ಬಂಗಾರಪ್ಪ 4,29,890 ಮತ ಗಳಿಸಿದ್ದರು. ಗೆಲುವಿನ ಅಂತರ 52,893 ಇತ್ತು.

point-22018ರಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಮತ್ತು ಜೆಡಿಎಸ್‌ನಿಂದ ಮಧು ಬಂಗಾರಪ್ಪ ಅಖಾಡದಲ್ಲಿದ್ದರು. ಆಗ ರಾಘವೇಂದ್ರ 5,43,306 ಮತ ಮಧು ಬಂಗಾರಪ್ಪ 4,91,158 ಮತ ಗಳಿಸಿದ್ದರು. ಗೆಲವಿನ ಅಂತರ 52,148 ಮತಗಳು.

point-32019ರ ಸಾರ್ವತ್ರಿಕ ಚುನಾವಣೆಯಲ್ಲಿ ಪುನಃ ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ಎದುರಾಳಿಗಳಾಗಿದ್ದರು. ಆಗ ರಾಘವೇಂದ್ರ 7,29,872 ಮತ, ಮಧು ಬಂಗಾರಪ್ಪ 5,06,512 ಮತ ಗಳಿಸಿದ್ದರು. ಗೆಲುವಿನ ಅಂತರ 2,23,360 ಮತಗಳು.

point-42024ರಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜ್‌ ಕುಮಾರ್‌ ಅವರ ವಿರುದ್ಧ 2,43,715 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಂಗಾರಪ್ಪ ದಾಖಲೆ ಮುರಿದ ರಾಘವೇಂದ್ರ

by-raghavendra.webpಇನ್ನು ಶಿವಮೊಗ್ಗ ಕ್ಷೇತ್ರದಿಂದ ಅತಿ ಹೆಚ್ಚು ಬಾರಿ ಲೋಕಸಭೆಗೆ ಆಯ್ಕೆಯಾದ ದಾಖಲೆಯನ್ನು ಬಿ.ವೈ.ರಾಘವೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಕೆ.ಜಿ.ಒಡೆಯರ್‌ ಎರಡು ಬಾರಿ, ಟಿ.ವಿ.ಚಂದ್ರಶೇಖರಪ್ಪ ಎರಡು ಬಾರಿ ಆಯ್ಕೆಯಾಗಿದ್ದರು. ಆ ದಾಖಲೆಯನ್ನು ಬಂಗಾರಪ್ಪ ಸರಿಗಟ್ಟಿದ್ದರು. 1999, 2004 ಮತ್ತು 2005 (ಉಪ ಚುನಾವಣೆ) ಆಯ್ಕೆಯಾಗಿದ್ದರು. ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗುವ ಮೂಲಕ ಬಂಗಾರಪ್ಪ ದಾಖಲೆಯನ್ನು ಸರಿಗಟ್ಟಿದ್ದಾರೆ. 2009, 2018 (ಉಪ ಚುನಾವಣೆ), 2019, 2024ರಲ್ಲಿ ಆಯ್ಕೆಯಾಗಿ ಕ್ಷೇತ್ರದಲ್ಲಿ ದಾಖಲೆ ಮಾಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಚ್ಚರಿ ಪ್ರಮಾಣದ ಮತ ಗಳಿಸಿದ ಜೊಮಾಟೊ ಡೆಲಿವರಿ ಬಾಯ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment