ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ELECTION NEWS : ಲೋಕಸಭೆ ಚುನಾವಣೆಗೆ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪ್ರಚಾರ ಬಿರುಸುಗೊಳಿಸಿದ್ದಾರೆ. ಬುಧವಾರ ವಿವಿಧೆಡೆ ಪ್ರಚಾರ, ಕಾರ್ಯಕರ್ತರ ಸಭೆ ನಡೆಸಿದರು.
ಎಲ್ಲೆಲ್ಲಿ ಪ್ರಚಾರ, ಸಭೆಗಳು ನಡೆದವು?
ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಭೆ
ಶಿವಮೊಗ್ಗ : ಬಿಜೆಪಿ ಶಿವಮೊಗ್ಗ ನಗರ ಮಂಡಲದ ವತಿಯಿಂದ ವಾರ್ಡ್ 5ರ ಗುರುಪುರ ಮತ್ತು ಪುರಲೆ ಭಾಗದ ಪಕ್ಷದ ಪ್ರಮುಖರ ಮನೆಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಮೋದಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಸಂಸದ ರಾಘವೇಂದ್ರ ತಿಳಿಸಿದರು. ಈ ಸಂದರ್ಭ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಬಿಜೆಪಿ ಮಹಾ ಶಕ್ತಿಕೆಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಸ್ವಾಮೀಜಿ ಭೇಟಿ, ಚರ್ಚೆ
ಶಿವಮೊಗ್ಗ : ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ನಡೆಸಿ, ಆಶೀರ್ವಾದ ಪಡೆದರು.
ಮುಖಂಡರು, ಕಾರ್ಯಕರ್ತರ ಜತೆ ಚರ್ಚೆ
ಶಿವಮೊಗ್ಗ : ಇತ್ತ ಶಿವಮೊಗ್ಗದ ನಿವಾಸದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ತಮ್ಮ ಬೆಂಬಲಿಗರನ್ನು ಭೇಟಿಯಾಗಿದ್ದರು. ಚುನಾವಣೆ ಕುರಿತು ಪ್ರಮುಖ ಚರ್ಚೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರಗೆ ಮೈತುಂಬ ಬಣ್ಣ ಬಳಿದ ಯುವಕರು