ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 APRIL 2024
ELECTION NEWS : ಸಂಸದ ಬಿ.ವೈ.ರಾಘವೇಂದ್ರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಜನರ ಭೇಟಿಯ ಜೊತೆಗೆ ಕಾರ್ಯಕರ್ತರ ಸಭೆ, ಸಮಾವೇಶಗಳಲ್ಲಿ ಭಾಗಿಯಾಗುತ್ತಿದ್ದಾರೆ. ಯುಗಾದಿ ಹಬ್ಬದಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಇಲ್ಲಿದೆ ಅದರ ಲಿಸ್ಟ್
ಯುಗಾದಿ ಉತ್ಸವ
ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಆರ್‌ಎಸ್‌ಎಸ್ ವತಿಯಿಂದ ಆಯೋಜಿಸಿದ್ದ ಯುಗಾದಿ ಉತ್ಸವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗಣವೇಶದಲ್ಲಿ ಹಾಜರಾಗಿದ್ದ ಬಿ.ವೈ.ರಾಘವೇಂದ್ರ, ಕಾರ್ಯಕ್ರಮದ ಬಳಿಕ ಆರ್‌ಎಸ್‌ಎಸ್ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾದರು. ಫೋಟೊ, ಸೆಲ್ಫಿಗೆ ಪೋಸ್ ನೀಡಿದರು.
ಸಂಸದ, ನಾಯಕನಾಗಿ ಅಲ್ಲ ಸ್ವಯಂ ಸೇವಕನಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಬಿ.ವೈ.ವಿಜಯೇಂದ್ರ ಅವರು ಕಳೆದ ಎರಡು ದಿನ ಶಿಕಾರಿಪುರದಲ್ಲಿ 16ಕ್ಕೂ ಹೆಚ್ಚು ಪ್ರಚಾರ ಸಭೆ ನಡೆಸಿದರು. ಶಿಕಾರಿಪುರ ಕ್ಷೇತ್ರದಲ್ಲೂ ಹೆಚ್ಚು ಮತಗಳು ಬಿಜೆಪಿಗೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 400 ಸ್ಥಾನದಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಯುಗಾದಿ ಹೇಗೆ ಮರಳಿ ಬರುತ್ತದೆಯೋ ಹಾಗೇ ಮತ್ತೆ ಮತ್ತೆ ಮೋದಿ ಪ್ರಧಾನಿ ಆಗಲಿದ್ದಾರೆ.ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ
ಬೂತ್ ಮಟ್ಟದ ಕಾರ್ಯಕರ್ತರ ಸಭೆ
ಇನ್ನು, ಸೋಮವಾರ ಶಿಕಾರಿಪುರ ತಾಲೂಕು ತಾಳಗುಂದದ ಶ್ರೀ ವೀರಭದ್ರೇಶ್ವರ ದೇಗುಲದ ಪಕ್ಕದ ಆವರಣದಲ್ಲಿ ತೊಗರ್ಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಪಂಚಾಯಿತಿಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಲಾಯಿತು. ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಶಿರಾಳಕೊಪ್ಪದಲ್ಲು ಸಭೆ
ಶಿರಾಳಕೊಪ್ಪದ ವಾಸವಿ ಕಲ್ಯಾಣ ಮಂಟಪದಲ್ಲಿ ಮಹಾ ಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿಯು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.
ಇತ್ತ ಯುಗಾದಿ ಹಬ್ಬದಂದು ಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾದರು. ಚುನಾವಣೆ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ – ಈಶ್ವರಪ್ಪ ಹೆಸರಿನ ವಾಟ್ಸಪ್ ಗ್ರೂಪ್‌ನಲ್ಲಿ ಅವಹೇಳನ, ಬಿಜೆಪಿ ಮುಖಂಡನಿಂದ ದೂರು, ಕಾರ್ಯಕರ್ತನಿಂದ ಪ್ರತಿದೂರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422