ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 JUNE 2024
SHIMOGA : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ನ ನ್ಯಾಯಾಧೀಶರಾದ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ವಾರೆಂಟ್ (Warrant) ಜಾರಿಗೊಳಿಸಿದ್ದಾರೆ.
ರಾಘವೇಂದ್ರ ಫಸ್ಟ್ ರಿಯಾಕ್ಷನ್
ಈ ಸಂಬಂಧ ಯಡಿಯೂರಪ್ಪ ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ತಮಗೆ ಅನ್ಯಾಯವಾಗಿದೆ ಎಂದು ಸಂತ್ರಸ್ತೆ ನಮ್ಮ ತಂದೆಯ ಮೂಲಕ ಪೊಲೀಸ್ ಕಮಿಷನರ್ಗೆ ಕರೆ ಮಾಡಿಸಿದ್ದರು. ಆ ನಂತರ ಈ ಮಹಿಳೆ 40 ರಿಂದ 50 ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಿರುವುದು ಗೊತ್ತಾಗಿತ್ತು. ಕಳೆದ ಮೂರ್ನಾಲ್ಕು ತಿಂಗಳಲ್ಲಿ ಪ್ರಕರಣ ಸಂಬಂಧ ಸಿಐಡಿ ತನಿಖೆಯಾಗಿದೆ, ಯಡಿಯೂರಪ್ಪ ಅವರ ಹೇಳಿಕೆ ಪಡೆಯಲಾಗಿದೆ. ಬಿ ರಿಪೋರ್ಟ್ ಹಾಕುವಂತಹ ಪ್ರಕರಣ ಇದುʼ ಎಂದರು.
‘ಈಗ ಏಕಾಏಕಿ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ. ಬಿಜೆಪಿ ವಿರುದ್ಧ ಸುಳ್ಳು ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ನಿಗಮ ಮಂಡಳಿ ಹಣ ದುರುಪಯೋಗ ವಿಚಾರಗಳನ್ನೆಲ್ಲ ಮರೆಮಾಚಲು ಈ ಪ್ರಕರಣವನ್ನು ಮುನ್ನಲೆಗೆ ತರಲಾಗಿರುವ ಸಾಧ್ಯತೆ ಇದೆ. ಈ ಹಿಂದೆಯು ನಮ್ಮ ಕುಟುಂಬವನ್ನು ವಾಲಿಬಾಲ್, ಫುಟ್ ಬಾಲ್ ಮಾಡಿಕೊಂಡಿದ್ದರು. ಎಲ್ಲದರಲ್ಲು ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿತ್ತು. ಈಗಲೂ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆʼ ಎಂದರು.
ಏನಿದು ಪ್ರಕರಣ?
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪುತ್ರಿ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಾರ್ಚ್ 14ರಂದು ಪ್ರಕರಣ ದಾಖಲಾಗಿತ್ತು. ಏ.12ರಂದು ಯಡಿಯೂರಪ್ಪ ಅವರು ತನಿಖಾಧಿಕಾರಿ ಮುಂದೆ ಹಾಜರಾಗಿದ್ದರು. ಈಚೆಗೆ ದೂರುದಾರ ಮಹಿಳೆ ಮೃತಪಟ್ಟಿದ್ದಾರೆ. ಈ ಮಧ್ಯೆ ಮಹಿಳೆಯ ಪುತ್ರ, ಮೂರು ತಿಂಗಳಾದರೂ ಪ್ರಕರಣದ ತನಿಖೆ ಪ್ರಗತಿಯಾಗಿಲ್ಲ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422