SHIVAMOGGA LIVE NEWS | 15 MARCH 2024
SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್ಗೆ ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದರು. ಈಶ್ವರಪ್ಪ, ಪುತ್ರ ಕಾಂತೇಶ್ ಜೊತೆಗೆ ಚರ್ಚೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಮನೆಗೆ ಮಧ್ಯಾಹ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದರು.
ಇನ್ನೂ ಸಮಯ ಮೀರಿಲ್ಲ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲದ್ದರಿಂದ ಸಮಯ ಮೀರಿಲ್ಲ. ಇನ್ನೂ ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೆ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸಬೇಕು. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಈಗಲೂ ಕಾಂತೇಶ್ ಅವರಿಗೆ ಹಾವೇರಿ ಟಿಕೇಟ್ ನೀಡಲು ಅವಕಾಶ ಇದೆ ಎಂದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಪ್ರಧಾನಿ, ಬೃಹತ್ ಪೆಂಡಾಲ್ ರೆಡಿ, ಮೋದಿ ಸಾಗುವ ರಸ್ತೆಗಳೆಲ್ಲ ಈಗ ಕ್ಲೀನ್ ಕ್ಲೀನ್