SHIMOGA : ಕೇಂದ್ರದ ಅಕ್ಕಿ(Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಬಳಿ ಇರುವ ಅಕ್ಕಿ ಬಿಜೆಪಿ ಅಕ್ಕಿಯಲ್ಲ. ಅದು ಅವರ ಮನೆಯದ್ದಲ್ಲ. ನಮ್ಮ ಸರ್ಕಾರ ಹಣ ಕೊಟ್ಟು ಅಕ್ಕಿ ಖರೀದಿಸಲಿದೆ. ಆ ಅಕ್ಕಿಯಲ್ಲಿ ನಮ್ಮ ರಾಜ್ಯದ ಹಣವು ಇದೆ. ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನವರಿಕೆ ಮಾಡಬೇಕು. ಬಡವರಿಗೆ ಅಕ್ಕಿ ಕೊಡಲು ತೊಂದರೆ ಮಾಡಲಾಗುತ್ತಿದೆ. ಈ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಬಿಪಿಎಲ್ ಕಾರ್ಡ್‌ದಾರರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.
ಯೋಜನೆಗಳನ್ನು ಘೋಷಿಸಿದ್ದೇವೆ ಅಂದ ಮಾತ್ರಕ್ಕೆ ಅಧಿಕಾರಕ್ಕೆ ಬಂದ ತಕ್ಷಣ ಕೊಡಲು ಸಾಧ್ಯವಿಲ್ಲ. ಅದೇನು ತಟ್ಟನೆ ಕತ್ತರಿಸಿ ಕೊಡಲು ಮೈಸೂರು ಪಾಕ್ ಅಲ್ಲ. ನಮ್ಮ ಪಕ್ಷ ನೀಡಿದ ಭರವಸೆಗಳೆಲ್ಲವನ್ನು ಈಡೇರಿಸಲಿದೆ. ಬಿಜೆಪಿಯವರು ಇಷ್ಟು ವರ್ಷ ಅಧಿಕಾರದಲ್ಲಿದ್ದರು ಈವರೆಗೆ 15 ಲಕ್ಷ ರೂ. ಕೊಟ್ಟಿಲ್ಲ. ಉಳಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರಕ್ಕೆ ಹಣ ಕೊಟ್ಟು ಅಕ್ಕಿ ಖರೀದಿಸುತ್ತೇವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ಪುನಾರಂಭ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ಆ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ
ಎಫ್‌ಸಿಐನಿಂದ ಕೇಳಿದ್ದು ಪುಗಸಟ್ಟೆ ಅಕ್ಕಿ ಅಲ್ಲ. ಅದಕ್ಕೆ ಹಣ ಕೊಡುತ್ತೇವೆ. ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ. ಬಿಜೆಪಿಯವರಿಗೆ ಇನ್ನೂ ಒಂದು ವರ್ಷ ಸಮಯ ಕೊಡುತ್ತೇವೆ. ಈ ಹಿಂದೆ ಕೊಟ್ಟ ಭರವಸೆಗಳನ್ನೆಲ್ಲ ಅವರಿಗೆ ಈಡೇರಿಸುವ ತಾಕತ್ತು ಇದ್ಯಾ?ಹೆಚ್.ಸಿ.ಯೋಗೇಶ್, ಪಾಲಿಕೆ ಸದಸ್ಯ
ಪ್ರತಿಭಟನಾ ಸಭೆಗೂ ಮುನ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗಾಂಧಿ ಬಜಾರ್ ಮೂಲಕ ಶಿವಪ್ಪನಾಯಕ ಪ್ರತಿಮೆವರೆಗೂ ಮೆರವಣಿಗೆ ನಡೆಸಲಾಯಿತು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ