ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 APRIL 2023
SHIMOGA : ಪಿಎಫ್‌ಐ ಸಂಘಟನೆಯಿಂದ ಹತ್ಯೆ ಬೆದರಿಕೆ ಇರುವ ಹಿನ್ನೆಲೆ ತಮ್ಮ ಮನೆಗೆ ಮತ್ತು ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಪಿಎಫ್‌ಐ ಸಂಘಟನೆಯ ಶಾಹಿಲ್ ಶೇಖ್ ಎಂಬಾತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿದ್ದ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಯಾರೆಲ್ಲ ಹಿಂದೂ ಧರ್ಮದ ಪರವಾಗಿ ಮಾತನಾಡುತ್ತಿದ್ದಾರೋ ಅವರ ಹತ್ಯೆಗೆ ಪಟ್ಟಿ ಸಿದ್ಧಪಡಿಸಿಕೊಂಡಿದ್ದ. ಅದರಲ್ಲಿ ತಮ್ಮ ಹೆಸರು ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಈ ಪ್ರಕರಣ ಈಗ ಎನ್‌ಐಎ ತನಿಖೆಗೆ ಶಿಫಾರಸಾಗಿದೆ. ಹಾಗಾಗಿ ತಮ್ಮ ಮನೆ, ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಮತ್ತು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಚುನಾವಣೆ ಸಂದರ್ಭ ವಿವಿಧೆಡೆ ಪ್ರವಾಸ ಕೈಗೊಳ್ಳುವಾಗಲು ಭದ್ರತೆ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, ಕುತೂಹಲ ಮೂಡಿಸಿದೆ ನಾರಾಯಣಸ್ವಾಮಿ ನಡೆ
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಮಧುಸೂದನ್ ಸೇರಿದಂತೆ ಹಲವರು ಇದ್ದರು.