ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 DECEMBER 2022
ಶಿವಮೊಗ್ಗ : ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು (sharavathi issue) ಪ್ರಸ್ತಾಪಿಸಲಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ವಿಧಾನ ಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು (sharavathi issue) ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ. ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ರಾಜ್ಯದ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಬಾಯಿಗೆ ಬೀಗ ಹಾಕಿಕೊಂಡು ಕುಳಿತಿದ್ದಾರೆ. ರಾಜ್ಯ ಸರ್ಕಾರ ಸಂತ್ರಸ್ತರ ಕುರಿತು ಮೊಸಳೆ ಕಣ್ಣೀರು ಸುರಿಸುತ್ತ್ತಿದೆ ಎಂದು ಟೀಕಿಸಿದರು.
ಇದನ್ನೂ ಓದಿ – ಕ್ಷೇತ್ರ ಪರಿಚಯ | ಭದ್ರಾವತಿ – ಯಾರೆ ಗೆದ್ದರು ಇಲ್ಲಿ ಜನರ ಬೇಡಿಕೆ ಒಂದೇ
ಇನ್ನು, ಸೊರಬದಲ್ಲಿ ದಂಡಾವತಿ ಯೋಜನೆ ಕುರಿತು ಮಾತನಾಡಿದ ಮಧು ಬಂಗಾರಪ್ಪ, ಬಿಜೆಪಿಯವರು ದಂಡಾವತಿ ಯೋಜನೆ ಮಾಡಿ ಹಲವರನ್ನು ಮುಳುಗಿಸಲು ಹೊರಟಿದ್ದರು. ಈಗ ಅಣೆಕಟ್ಟು ಬದಲು ಬ್ಯಾರೇಜ್ ಕಟ್ಟಲು ಹೊರಟಿದ್ದಾರೆ. ಬ್ಯಾರೇಜ್ ಕಟ್ಟಲು ತಮ್ಮ ವಿರೋಧವಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ – ಕ್ಷೇತ್ರ ಪರಿಚಯ | ಶಿವಮೊಗ್ಗ ಗ್ರಾಮಾಂತರ – 2 ಪರ್ಸೆಂಟ್ ಮತಗಳಿಂದ ಗೆಲುವು, ಸೋಲು ನಿರ್ಧಾರವಾಗಿತ್ತು
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಎನ್.ರಮೇಶ್, ಹೆಚ್.ಸಿ.ಯೋಗೇಶ್, ಎಸ್.ಪಿ.ದಿನೇಶ್, ಜಿ.ಡಿ.ಮಂಜುನಾಥ್, ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422