ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಉಪಾಧ್ಯಕ್ಷರಾಗಿ ಮಹಮ್ಮದ್ ಸಾದಿಕ್ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸದ್ದಾರೆ.
ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಅವರಿಗೆ 12 ಮತಗಳು, ಕಾಂಗ್ರೆಸ್‍ನ ಕಮಲಮ್ಮ ಅವರಿಗೆ 9 ಮತಗಳು ಲಭಿಸಿದವು.
ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಮಹಮ್ಮದ್ ಸಾದಿಕ್ ಅವರಿಗೆ 12 ಮತಗಳು, ಕಾಂಗ್ರೆಸ್‍ನ ಮಹಮ್ಮದ್ ದಸ್ತಗೀರ್ ಅವರಿಗೆ 9 ಮತಗಳು ಲಭಿಸಿತು.
ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಾಶಯ ತಿಳಿಸಿದರು.
ಕಾಂಗ್ರೆಸ್‍ನಿಂದ ಕಪ್ಪು ಬಾವುಟ ಪ್ರದರ್ಶನ
ಆಪರೇಷನ್ ಕಮಲ ನಡೆಸಿ, ಹಿಂಬಾಗಿಲ ಮೂಲಕ ಬಿಜೆಪಿ ಅಧಿಕಾರಕ್ಕೇರಿದೆ ಎಂದು ಪುರಸಭೆ ಕಾಂಗ್ರೆಸ್ ಸದಸ್ಯರು ಮತ್ತು ಕಾರ್ಯಕರ್ತರು ಆರೋಪಿಸಿದ್ದಾರೆ. ಪುರಸಭೆ ಸಭಾಂಗಣದ ಒಳಗೆ ಕಾಂಗ್ರೆಸ್ ಸದಸ್ಯರು ಕಪ್ಪು ಬಾವುಟ ತೋರಿಸಿ ಬಿಜೆಪಿ, ಸಂಸದ ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು.
ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವೇನು?
ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದಿತ್ತು. ಇತ್ತೀಚೆಗೆ ಮೂವರು ಪುರಸಭೆ ಸದಸ್ಯರು ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆ ಆಗಿದ್ದಾರೆ. ಇದು ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್‍ನ ಮೂವರು ಸದಸ್ಯರು ಕಡಿಮೆ ಆಗುತ್ತಿದ್ದಂತೆ ಬಿಜೆಪಿಗೆ ಬಹುಮತ ಲಭಿಸಿದ್ದು, ಅಧಿಕಾರಕ್ಕೇರಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]