ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021
ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್ ಮೂಗಿಗೆ ತುಪ್ಪ ಸವರುವ ಕೆಲಸವೆ ಹೊರತು, ಇದರಿಂದ ಯಾವುದೆ ಪ್ರಯೋಜನವಿಲ್ಲ. ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಕರೋನದಿಂದ ಸುಮಾರು 55 ಲಕ್ಷ ಕುಟುಂಬಗಳು ಸಮಸ್ಯೆಗೀಡಾಗಿವೆ. ರಾಜ್ಯ ಸರ್ಕಾರ ಕೇವಲ 2.5 ಲಕ್ಷ ಕುಟುಂಬಕ್ಕಷ್ಟೆ ಪ್ಯಾಕೇಜ್ ಘೋಷಿಸಿದೆ ಎಂದು ಆರೋಪಿಸಿದರು.
ಪ್ಯಾಕೇಜ್ ಘೋಷಣೆ ಮೂಗಿಗೆ ತುಪ್ಪ ಸವರುವ ಕೆಲಸವಾಗಿದೆ. ಇದರಿಂದ ಯಾವುದೆ ಪ್ರಯೋಜನವಿಲ್ಲ. ಹಲವು ದುಡಿಯುವ ವರ್ಗಗಳನ್ನು ಪ್ಯಾಕೇಜ್‍ನಿಂದ ಕೈಬಿಡಲಾಗಿದೆ. ಚಾಲಕರು, ಹೊಟೇಲ್ ಮಾಲೀಕರು, ಕೆಲಸಗಾರರು, ಸಿನಿಮಾ, ಕಿರುತೆರೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಹತ್ತಾರು ದುಡಿಯುವ ವರ್ಗಗಳನ್ನು ಕೈಬಿಡಲಾಗಿದೆ ಎಂದು ಸುಂದರೇಶ್ ಆರೋಪಿಸಿದರು.
ರಾಜ್ಯಾದ್ಯಂತ 1.26 ಕೋಟಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿವೆ. ಅವುಗಳಿಗೆ ಕನಿಷ್ಠ 10 ಸಾವಿರ ರೂ. ಘೋಷಿಸಬೇಕಿತ್ತು. ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಘೋಷಿಸಿಲ್ಲ. ಬ್ಯಾಂಕ್ ಖಾತೆ ಹೊಂದಿರದ ಚಿಂದಿ ಆಯುವವರು, ಖಾಸಗಿ ಬಸ್ ಚಾಲಕರು, ಕಂಡಕ್ಟರ್‍ಗಳು ಮತ್ತು ಇತರೆ ಶ್ರಮಿಕ ವರ್ಗದವರಿಗೂ ಯಾವುದೆ ಪರಿಹಾರ ಸಿಕ್ಕಿಲ್ಲ ಎಂದರು.
ಬೋಗಸ್ ಅಂಕಿ ಸಂಖ್ಯೆ ಕೊಡ್ತಿದ್ದಾರೆ
ಎರಡನೆ ಅಲೆ ಅತಿ ವೇಗವಾಗಿ ಹರಡುತ್ತಿದೆ. ಸಾವು, ನೋವಿಗೆ ಲೆಕ್ಕವೆ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಸಾವುಗಳ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ. ಬೋಗಸ್ ಹೇಳಿಕೆ ಮತ್ತು ಅಂಕಿ ಅಂಶಗಳನ್ನು ನೀಡಲಾಗುತ್ತಿದೆ. ಈ ಮೂಲಕ ರಾಜ್ಯ ಸರ್ಕಾರ ದಿಕ್ಕು ತಪ್ಪಿಸುತ್ತಿದೆ ಎಂದರು.
ಕರೋನ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422