ಕಾಂಗ್ರೆಸ್‌ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಮಂಜುನಾಥ ಗೌಡ, ಎಂ.ಶ್ರೀಕಾಂತ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ ಅವರು ಭೇಟಿಯಾಗಿ ಅಭಿನಂದಿಸಿದರು.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲಿ. ಆ ನಿಟ್ಟಿನಲ್ಲಿ ನಮ್ಮ ಪೂರ್ಣ ಸಹಕಾರ ಇರಲಿದೆ ಎಂದು ಮಂಜುನಾಥ ಗೌಡ ಅವರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ, ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷ ಲೋಕೇಶ್ ಕರಕುಚ್ಚಿ ಮತ್ತಿತರರು ಉಪಸ್ಥಿತರಿದ್ದರು.

RM-Manjunatha-Gowda-and-M-Srikanth-meets-BK-Hariprasad