SHIVAMOGGA LIVE | 6 JULY 2023
SHIMOGA : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ವತಿಯಿಂದ ವಿವಿಧ ಮೋರ್ಚಾಗಳ ಸಂಯುಕ್ತ ಸಮಾವೇಶ (convention) ಆಯೋಜಿಸಲಾಗಿತ್ತು. ಶುಭಮಂಗಳ ಕಲ್ಯಾಣ ಮಂಟಪದಲ್ಲಿ ನಡೆದ ಸಮಾವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.
ಸಂಸದರು ಹೇಳಿದ ಮೂರು ಪ್ರಮುಖಾಂಶ
ಸಮಾವೇಶವನ್ನು (convention) ಉದ್ದೇಶಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಕಾರ್ಯಕರ್ತರಿಗೆ ಅವರು ತಿಳಿಸಿದ ಮೂರು ಪ್ರಮುಖಾಂಶ ಇಲ್ಲಿದೆ.
ಪಾಯಿಂಟ್ 1 – ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ. ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವೆಂದು ನಂಬಿಸುವ ಕಾಂಗ್ರೆಸ್ ಹುನ್ನಾರವನ್ನು ಜನರಿಗೆ ತಿಳಿಸಿ. ಸಂಪರ್ಕ್ ಸೆ ಸಮರ್ಥನ್ ಮತ್ತು ವಿಕಾಸ ತೀರ್ಥ ಯಾತ್ರೆ ಮೂಲಕ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕಿದೆ. ಪ್ರತಿದಿನ ಕನಿಷ್ಠ 2 ಗಂಟೆ ಸಮಯವನ್ನು ಪಕ್ಷಕ್ಕಾಗಿ ಮೀಸಲಿಡಿ.
ಪಾಯಿಂಟ್ 2 – ಬಿಜೆಪಿ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷ ಈವರೆಗೂ ಆ ಸಮುದಾಯದ ದಾರಿ ತಪ್ಪಿಸಿ, ತುಷ್ಟೀಕರಣ ಮಾಡಿಕೊಂಡು ಬಂದಿತ್ತು. ಅಲ್ಪಸಂಖ್ಯಾತ ಸಮುದಾಯ ಇದನ್ನು ಅರ್ಥೈಸಿಕೊಳ್ಳಬೇಕು.
ಪಾಯಿಂಟ್ 3 – ಏಕರೂಪ ನಾಗರಿಕ ಸಂಹಿತೆ ಯಾವುದೇ ಧರ್ಮದ ವಿರುದ್ಧವಲ್ಲ. ಒಂದು ದೇಶ, ಒಂದೇ ಕಾನೂನು ಬೇಕು ಅನ್ನುವುದು ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು. ಮೋದಿ ಸರ್ಕಾರ 370ನೇ ವಿಧಿ ರದ್ದುಗೊಳಿಸಿ ಅವರ ಕನಸು ನನಸು ಮಾಡಿದೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.
ಇದನ್ನೂ ಓದಿ – ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ, ಕಾರಣವೇನು?
ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ವಿಕಾಸ್ ಪುತ್ತೂರು, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಂಜುನಾಥ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಶೋಕ ಮೂರ್ತಿ, ಪ್ರಮುಖರಾದ ಎಸ್.ದತ್ತಾತ್ರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ, ದಿನೇಶ್ ಬುಳ್ಳಾಪುರ, ವೀರಭದ್ರ ಪೂಜಾರಿ, ನಾಗರಾಜ್ ತಮ್ಮಡಿಹಳ್ಳಿ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200