ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ನವೆಂಬರ್ 2020
ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ಮುಂದುವರೆದಿದೆ. ಮತ್ತೊಬ್ಬ ಕಾಂಗ್ರೆಸ್ ಪುರಸಭೆ ಸದಸ್ಯೆ ರಾಜೀನಾಮೆ ಸಲ್ಲಿಸಿ, ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆತಂಕ ಶುರುವಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ರಾಜೀನಾಮೆ ನೀಡಿದ್ದು ಯಾರು?
ಪುರಸಭೆಯ 5ನೇ ವಾರ್ಡ್ನ ಸದಸ್ಯೆ ಜ್ಯೋತಿ ಸಿದ್ದಲಿಂಗೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರ ಸಂಖ್ಯೆ 9ಕ್ಕೆ ಇಳಿಕೆಯಾಗಿದೆ.
ರಾಜೀನಾಮೆಗೆ ಕಾರಣ ಏನು?
ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಯೋತಿ ಸಿದ್ದಲಿಂಗೇಶ್, ವಾರ್ಡ್ನ ಸಮಗ್ರ ಅಭಿವೃದ್ಧಿಯ ಸಂಕಲ್ಪ ಮಾಡಿದ್ದೆ. ಅದಕ್ಕಾಗಿ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ಯಾವುದೆ ಷರತ್ತು, ಆಸೆ, ಆಮಿಷಗಳಿಗೆ ಒಳಗಾಗದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಇದೆ ಕ್ಷೇತ್ರದವರು. ಹಾಗಾಗಿ ಪುರಸಭೆಗೆ ಹೆಚ್ಚಿನ ಅನುದಾನ ಬರುತ್ತಿದೆ. ಇದರಿಂದ ತಮ್ಮ ವಾರ್ಡ್ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದರು.
ಕುಸಿದ ಕಾಂಗ್ರೆಸ್ ಬಲ
ಶಿಕಾರಿಪುರ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಆಪರೇಷನ್ ಕಮಲದಿಂದಾಗಿ ಪಕ್ಷ ಬಲ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷ 12 ಸ್ಥಾನ ಗಳಿಸಿತ್ತು. ಈ ಹಿಂದೆ 20ನೇ ವಾರ್ಡ್ನ ಸದಸ್ಯೆ ಉಮಾ, 9ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ರಮೇಶ್ ಅವರು ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆ ಆಗಿದ್ದರು. ಈಗ ಜ್ಯೋತಿ ಸಿದ್ದಲಿಂಗೇಶ್ ಅವರ ರಾಜೀನಾಮೆಯಿಂದ ಕಾಂಗ್ರೆಸ್ ಸದಸ್ಯರ ಸಂಖ್ಯೆ 9ಕ್ಕೆ ಕುಸಿದಿದೆ.
ಬಿಜೆಪಿ ಸಂಖ್ಯೆ ಹೆಚ್ಚಳ
ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಎಂಟು ಸ್ಥಾನ ಗಳಿಸಿತ್ತು. ಈ ನಡುವೆ ಪಕ್ಷೇತರರಾಗಿ ಗೆಲುವು ಸಾಧಿಸಿದ್ದ 1ನೇ ವಾರ್ಡ್ನ ಪ್ರಶಾಂತ್ ಜೀನಳ್ಳಿ, 8ನೇ ವಾರ್ಡ್ನ ಮಹಮ್ಮದ್ ಸಾದಿಕ್, 16ನೇ ವಾರ್ಡ್ನ ರೇಖಾಬಾಯಿ ಮಂಜು ಸಿಂಗ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಜೆಪಿ ಸದಸ್ಯರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಶಾಸಕರು ಮತ್ತು ಲೋಕಸಭೆ ಸದಸ್ಯರ ಮತ ಸೇರಿದರೆ ಬಿಜೆಪಿ ಸಂಖ್ಯೆ 13ಕ್ಕೆ ಹೆಚ್ಚಳವಾಗಲಿದೆ.
ಶಿಕಾರಿಪುರ ಪುರಸಭೆಯಲ್ಲಿ ‘ಆಪರೇಷನ್ ಕಮಲ’ ನಡೆಯುತ್ತಿರುವ ಬಗ್ಗೆ ಈ ಹಿಂದೆಯೇ ಕಾಂಗ್ರೆಸ್ ಆರೋಪಿಸಿತ್ತು. ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿತ್ತು. ಅಲ್ಲದೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪುರಸಭೆಯ ಕಾಂಗ್ರೆಸ್ ಸದಸ್ಯರು ತಾವ್ಯಾರು ಪಕ್ಷ ತೊರೆಯುವುದಿಲ್ಲ ಎಂದು ವಾಗ್ದಾನ ನೀಡಿದ್ದರು. ಈಗ ಜ್ಯೋತಿ ಸಿದ್ದಲಿಂಗೇಶ್ ಅವರ ರಾಜೀನಾಮೆ ಕಾಂಗ್ರೆಸ್ ಪಾಳಯದ ನಿದ್ದೆಗೆಡಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]