SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 JANUARY 2021

ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣವನ್ನು ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದಮರಾಮಯ್ಯ, ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಈ ಪ್ರಕರಣದಲ್ಲಿ ನ್ಯಾಯ ಸಿಗಲು ಸಾಧ್ಯ  ಎಂದರು.

ಹೆಚ್ಚುವರಿ ಪರಿಹಾರ ನೀಡಬೇಕು

ಸ್ಪೋಟ ಪ್ರಕರಣದಲ್ಲಿ ಮೃತರಾದವರಿಗೆ ಸರ್ಕಾರ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಆದರೆ ಇದಕ್ಕಿಂತಲೂ ಹೆಚ್ಚಿನ ಪರಿಹಾರ ನೀಡಬೇಕು. ಮಾನವೀಯ ದೃಷ್ಟಿಯಿಂದ ಪರಿಹಾರವನ್ನು ಕೂಡಲೆ ಬಿಡುಗಡೆ ಮಾಡಬೇಕು. ಯಾವುದೆ ತಾಂತ್ರಿಕ ಕಾರಣದ ನೆಪವೊಡ್ಡದೆ ಕೂಡಲೆ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಆಡಳಿತ ಪಕ್ಷದವರದ್ದೇ ಕ್ವಾರಿಗಳು

ಜಿಲ್ಲೆಯಲ್ಲಿ ಇಷ್ಟೊಂದು ಅಕ್ರಮಗಳಾಗುತ್ತಿದ್ದರೂ, ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರಿಗೆ ಮಾಹಿತಿ ಇಲ್ಲವೆ. ಇಲ್ಲಿನ ಅಕ್ರಮಗಳಲ್ಲೆಲ್ಲ ಆಡಳಿತ ಪಕ್ಷದವರದ್ದೇ ಕೈವಾಡವಿದೆ. ನಮ್ಮ ಅವಧಿಯದ್ದೋ, ಈಗಿನ ಅವಧಿಯದ್ದೋ ಒಟ್ಟಿನಲ್ಲಿ ಅಕ್ರಮದ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸದನದಲ್ಲಿ ಪ್ರಸ್ತಾಪ ಮಾಡ್ತೀನಿ

ಅಕ್ರಮ ಗಣಿಗಾರಿಕೆ ಮತ್ತು ಕ್ವಾರಿಯಲ್ಲಿನ ಸ್ಪೋಟದ ಕುರಿತು ವಿಧಾನಸಭೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಇಲ್ಲಿ ಕೇಳಿರುವ ಬೇಡಿಕೆಗಳನ್ನೇ ಸದನದಲ್ಲೂ ಸರ್ಕಾರದ ಮುಂದಿಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

VIDEO REPORT

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕತನಿಕೆಯನ್ನುರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment