‘ಆಗ ನಾನೇ ತಪ್ಪು ಮಾಡಿಬಿಟ್ಟೆ, ಇಲ್ಲವಾಗಿದ್ದಲ್ಲಿ ಸಂಗಮೇಶ್ವರ್ ನನ್ನ ಸಂಪುಟದಲ್ಲಿ ಮಂತ್ರಿಯಾಗಿರುತ್ತಿದ್ದರು’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI| ನಾನು ಮುಖ್ಯಮಂತ್ರಿ ಆಗಿದ್ದಾಗ ಸಂಗಮೇಶ್ವರ್ ಅವರಿಗೆ ಟಿಕೆಟ್ ಕೊಡದೆ ತಪ್ಪು ಮಾಡಿಬಿಟ್ಟೆ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಶ್ಚಾತ್ತಾಪದ ನುಡಿಗಳನ್ನು ಆಡಿದರು. (siddaramaiah at bhadravathi)

Shimoga Nanjappa Hospital

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಶಾಸಕ ಸಂಗಮೇಶ್ವರ ಅವರ 60ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಂಗಮೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಂಗಮೇಶ್ವರ್ ಅವರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿಬಿಟ್ಟೆ. ಆಗ ನನ್ನ ಸ್ನೇಹಿತ ಸಿ.ಎಂ.ಇಬ್ರಾಹಿಂಗೆ ಟಿಕೆಟ್ ಕೊಟ್ಟುಬಿಟ್ಟೆವು. ಸಂಗಮೇಶ್ವರ್ ಅವರಿಗೆ ಟಿಕೆಟ್ ನೀಡಿದ್ದರೆ ಗೆದ್ದು ನನ್ನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿರುತ್ತಿದ್ದರು ಎಂದರು.

(siddaramaiah at bhadravathi)

‘50 ಕೋಟಿ ರೂ. ಹಣ ಸಿಗುತ್ತಿತ್ತು’

ಸಂಗಮೇಶ್ವರ ಅವರಿಗೂ ಆಪರೇಷನ್ ಕಮಲ ಮಾಡುವ ಪ್ರಯತ್ನ ನಡೆದಿತ್ತು. ಆದರೆ ಅವರು ಪಕ್ಷ ನಿಷ್ಠೆ ಬದಲಿಸಲಿಲ್ಲ. ಆಗ ಬಿಜೆಪಿಗೆ ಹೋಗಿದ್ದರೆ ಸಂಗಮೇಶ್ವರ ಅವರಿಗೆ 50 ಕೋಟಿ ರೂ. ಸಿಗುತ್ತಿತ್ತು. ಆದರೆ ದುಡ್ಡಿಗೆ ಆಸೆ ಪಡದೆ ಪಕ್ಷದಲ್ಲಿ ಉಳಿದರು. ಅವರಿಗೆ ರಾಜಕೀಯ ಭವಿಷ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಭದ್ರಾವತಿಯಲ್ಲಿ ನಡೆದ ಹಲವು ಸಭೆಯಲ್ಲಿ ಭಾಗಹಿವಹಿಸಿದ್ದೇನೆ. ಆದರೆ ಸಭೆಯೊಂದರಲ್ಲಿ ಇಷ್ಟೊಂದು ಸಂಖ್ಯೆಯ ಜನರನ್ನು ನೋಡುತ್ತಿರುವುದು ಇದೆ ಮೊದಲು. ಇದನ್ನು ಗಮನಿಸಿದರೆ ಸಂಗಮೇಶ್ವರ ಅವರು ಪುನರಾಯ್ಕೆ ಆಗುವುದು ಖಚಿತವಾಗಿದೆ. ಅವರಿಗೆ ರಾಜಕೀಯ ಭವಿಷ್ಯವಿದೆ. ಕಾಂಗ್ರೆಸ್ ಪಕ್ಷ ಪುನಃ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (siddaramaiah at bhadravathi)

Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 29, 2022

Leave a Comment