ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜಾತಿ ಗಣತಿ ವರದಿ ಸಿದ್ದವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ. ಆದರೂ ವರದಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಿಲ್ಲ. ಲೋಕಸಭೆ ಚುನಾವಣೆವರೆಗೂ ಜಾತಿಗಣತಿ ವರದಿ ಬಿಡಗಡೆ ಮಾಡುವುದಿಲ್ಲ. ಆದ್ದರಿಂದ ಸುಳ್ಳು ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದರು.
ಬದುಕಿದ್ದೀನಿ ಎಂದು ತೋರಿಸಲು ಹೇಳಿಕೆ
ಪ್ರತ್ಯೇಕ ರಾಷ್ಟ್ರ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು. ದೇಶದಲ್ಲಿ ತಾನೊಬ್ಬ ರಾಜಕಾರಣಿ ಬದುಕಿದ್ದೇನೆ ಎಂದು ತೋರಿಸಲು ಹೇಳಿಕೆ ನೀಡಿದ್ದಾರೆ. ಹಿಂದುಸ್ಥಾನ ಮತ್ತು ಪಾಕಿಸ್ತಾನವನ್ನು ಒಡೆದಿದ್ದು ಕಾಂಗ್ರೆಸ್ ಪಕ್ಷದವರೆ. ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ ಒಪ್ಪಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದರು.
ಗುತ್ತಿಗೆದಾರರ ಸಂಘ ಕಣ್ಮುಚಿ ಕೂತಿದೆ
ಕಾಂಗ್ರೆಸ್ ಸರ್ಕಾರದಲ್ಲಿ ಶೇ.40ಕ್ಕಿಂತಲು ಹೆಚ್ಚು ಕಮಿಷನ್ ಇದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಬಿ.ಶಿವಾರಾಂ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಕಮಿಷನ್ ಕುರಿತು ಆರೋಪ ಮಾಡಿದ್ದರು. ಈಗ ಕಾಂಗ್ರೆಸ್‌ನವರೆ ಶೇ.40ಕ್ಕಿಂತಲು ಹೆಚ್ಚು ಕಮಿಷನ್ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಈಗ ಕಣ್ಮುಚ್ಚಿ ಕುಳಿತಿದ್ದಾರೆ. ಇದಕ್ಕೆ ಕಾಂಗ್ರೆಸಿಗರು ಏನು ಪ್ರತಿಕ್ರಿಯೆ ಕೊಡುತ್ತಾರೆ ಎಂದು ಸವಾಲು ಹಾಕಿದರು.
ಇದನ್ನೂ ಓದಿ – ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು, ದರೋಡೆ ಬಳಿಕ ಕೊಲೆ ಶಂಕೆ