SHIVAMOGGA LIVE NEWS | 14 JANUARY 2023
SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳ ಬದಲು 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರು ಈ ಬಾರಿ ಗೆಲುವು (win) ಸಾಧಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರ ಪಕ್ಷದವರೆ ಕಾದು ಕೂತಿದ್ದಾರೆ. ಹಾಗಾಗಿ ಈ ಬಾರಿ ಅವರು 25 ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು ಗೆಲ್ಲವುದಿಲ್ಲ (win) ಎಂದರು.
ಹಲವರ ಸೋಲಿಗೆ ಕಾರಣವಾಗಿದ್ದಾರೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಅವರದ್ದೆ ಪಕ್ಷದ ಡಾ. ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ಸೋಲುವಂತೆ ನೋಡಿಕೊಂಡಿದ್ದರು. ಕೋಲಾರದಲ್ಲಿ ಹೆಚ್.ಮುನಿಯಪ್ಪ ಅವರ ಸೋಲಿಗೆ ಕಾರಣವಾಗಿದ್ದರು. ಇದೆಲ್ಲವನ್ನು ಅವರ ಬೆಂಬಲಿಗರು ಇನ್ನು ಮರೆತಿಲ್ಲ. ಇದೆ ರೀತಿ ಕಾಂಗ್ರೆಸ್ ಪಕ್ಷದ ಇನ್ನೂ ಕೆಲವರ ಸೋಲಿನಲ್ಲಿ ಇವರ ಪಾತ್ರವಿದೆ. ಇದೆ ಕಾರಣಕ್ಕೆ ಅವರೀಗ ಬಾದಾಮಿ ಕ್ಷೇತ್ರವನ್ನು ಬಿಟ್ಟು ಹೊರಟಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ನಾಲ್ವರು ಸೇರಿ ಸೋಲಿಸುತ್ತಾರೆ
ಸಿದ್ದರಾಮಯ್ಯ ಅವರಿಗೆ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಬಾದಾಮಿಯಲ್ಲಿ ಜನರು ಕೈ ಕೊಡುತ್ತಾರೆ ಅನ್ನುವುದು ಗೊತ್ತಿದೆ. ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಅಂದಿದ್ದರು. ಈಗ ಇದ್ದಕ್ಕಿದ್ದ ಹಾಗೆ ದೇವರು ಪ್ರತ್ಯಕ್ಷವಾಗಿ 2 ಕಡೆ ಸ್ಪರ್ಧಿಸುವಂತೆ ಹೇಳಿದೆ ಅನ್ನುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ನಾಲ್ವರು ಈಗ ಸಿದ್ದರಾಮಯ್ಯಗೆ ಉತ್ತರ ಕೊಡಲು ಕಾಯುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ 2 ಕ್ಷೇತ್ರಗಳಲ್ಲ 25 ಕಡೆ ಸ್ಪರ್ಧಿಸಿದರು ಗೆಲುವು ಸಾಧಿಸುವುದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ – ಟಿವಿ ಮಾಧ್ಯಮಗಳಲ್ಲಿ ‘ಕಿಮ್ಮನೆ ಮನೆ ಮೇಲೆ ದಾಳಿ’ ಸುದ್ದಿ, ವಾಸ್ತವವೇನು? ಕಿಮ್ಮನೆ ರತ್ನಾಕರ್ ಫಸ್ಟ್ ರಿಯಾಕ್ಷನ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200